May 11, 2026
Monday, May 11, 2026
spot_img

ವಿಶೇಷ ಅಧಿವೇಶನ ಕರೆದ ಕೇಂದ್ರ ಸರಕಾರ: ಲೋಕಸಭಾ ಸ್ಥಾನ 543 ರಿಂದ 850ಕ್ಕೆ ಹೆಚ್ಚಳಕ್ಕೆ ಪ್ರಸ್ತಾವನೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸಂಸತ್ ನಲ್ಲಿ ವಿಶೇಷ ಅಧಿವೇಶನ ಮೂಲಕ ಮಹಿಳಾ ಮೀಸಲಾತಿ ಮಸೂದೆಯ ತಿದ್ದುಪಡಿ ಮತ್ತು ಕ್ಷೇತ್ರಗಳ ಪುನರ್ವಿಂಗಡಣೆಯ ಪ್ರಕ್ರಿಯೆ ಮಸೂದೆ ಮಂಡಿಸುವ ಕೇಂದ್ರ ಸರಕಾರ ಸಿದ್ಧತೆ ನಡೆಸುತ್ತಿದ್ದು, ಇದರ ಭಾಗವಾಗಿ ಲೋಕಸಭಾ ಸ್ಥಾನಗಳನ್ನು 543 ರಿಂದ 850ಕ್ಕೆ ಹೆಚ್ಚಿಸಲು ಪ್ರಸ್ತಾವನೆ ಸಲ್ಲಿಸಿದೆ.

ಈ ಸಂಬಂಧ ಇಂದು ಈ ಎರಡು ಮಸೂದೆಗಳ ಕರಡು ಪ್ರತಿಯನ್ನು ಕೇಂದ್ರ ಸಂಸದೀಯ ಇಲಾಖೆ ಎಲ್ಲಾ ಸಂಸದರಿಗೆ ಹಂಚಿಕೆ ಮಾಡಿದೆ.

2029ರ ಲೋಕಸಭಾ ಚುನಾವಣೆಗೆ ಮುನ್ನ ಈ ಎರಡು ಕಾಯ್ದೆ ಜಾರಿಗೆ ತರಲು ಕೇಂದ್ರ ಸರಕಾರ ಉದ್ದೇಶಿಸಿದ್ದು, ಇದರ ಭಾಗವಾಗಿ ಪ್ರತಿ ಜನಗಣತಿಯ ನಂತರ ಸಂಸದೀಯ ಕ್ಷೇತ್ರಗಳ ಮರು ಹೊಂದಾಣಿಕೆ ಪ್ರಕ್ರಿಯೆಯನ್ನು ನಿಯಂತ್ರಿಸುವ ಸಂವಿಧಾನದ 82ನೇ ವಿಧಿಗೆ ತಿದ್ದುಪಡಿ ಮಾಡಲು ನಿರ್ಧರಿಸಿದೆ.

ರಾಜ್ಯಗಳಿಂದ ಲೋಕಸಭೆಗೆ ಆಯ್ಕೆಯಾಗುವ ಸದಸ್ಯರ ಗರಿಷ್ಠ ಸಂಖ್ಯೆಯನ್ನು 815ಕ್ಕೆ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಂದ ಆಯ್ಕೆಯಾಗುವವರ ಸಂಖ್ಯೆಯನ್ನು ಗರಿಷ್ಠ 35ಕ್ಕೆ ನಿಗದಿಪಡಿಸಲಾಗಿದೆ. ಈ ಮೂಲಕ ಒಟ್ಟು ಸಂಖ್ಯಾಬಲ 850ಕ್ಕೆ ಏರಿಕೆಯಾಗಲಿದೆ.

ಅದೇ ರೀತಿ ಸಂಸತ್ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ.33 ರಷ್ಟು ಮೀಸಲಾತಿ ಒದಗಿಸುವ ಗುರಿಯನ್ನು ಹೊಂದಿದ್ದು, ಈ ಹಿನ್ನೆಲೆ ಏಪ್ರಿಲ್‌ 16 ರಿಂದ ಕರೆಯಲಾಗುವ 3 ದಿನಗಳ ವಿಶೇಷ ಅಧಿವೇಶನ ಹೆಚ್ಚು ಮಹತ್ವ ಪಡೆದುಕೊಂಡಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !