July 29, 2026
Wednesday, July 29, 2026
spot_img

ಮಧ್ಯಪ್ರಾಚ್ಯದ ಸಂಘರ್ಷದಲ್ಲಿ ಸಿಲುಕಿರುವ ಭಾರತೀಯರ ರಕ್ಷಣೆಗೆ ಕೇಂದ್ರ ಸರ್ಕಾರ ಬದ್ಧ: ಸಚಿವ ಎಸ್.ಜೈಶಂಕರ್

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಮಧ್ಯಪ್ರಾಚ್ಯದಲ್ಲಿನ ಸಂಘರ್ಷದಲ್ಲಿ ಸಿಲುಕಿರುವ ಭಾರತೀಯರ ರಕ್ಷಣೆಗೆ ಕೇಂದ್ರ ಸರ್ಕಾರ ಬದ್ಧ ಎಂದು ವಿದೇಶಾಂಗ ಸಚಿವ ಎಸ್.ಜೈಶಂಕರ್ ಹೇಳಿದ್ದಾರೆ.

ರಾಜ್ಯಸಭೆಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ಮಧ್ಯಪ್ರಾಚ್ಯದಲ್ಲಿನ ಬೆಳವಣಿಗೆಗಳು ಆತಂಕದ ವಿಷಯವಾಗಿದೆ. ಫೆಬ್ರವರಿ 20 ರಂದು ಪತ್ರ ಬರೆದು ಸಹನಶೀಲತೆ ತೋರಿಸಿ ಉದ್ವಿಗ್ನತೆ ಕಡಿಮೆ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಲಾಗಿತ್ತು ಎಂದು ತಿಳಿಸಿದರು.

ಕೇಂದ್ರ ಸರಕಾರ ಭಾರತೀಯ ನಾಗರಿಕರ ಸುರಕ್ಷತೆ ಮತ್ತು ರಾಷ್ಟ್ರೀಯ ಹಿತಾಸಕ್ತಿ ರಕ್ಷಣೆಗೆ ಸದಾ ಬದ್ದವಾಗಿದ್ದು, ಜೊತೆಗೆ ಶಾಂತಿ ಮತ್ತು ಸ್ಥಿರತೆಯನ್ನು ಪುನಃಸ್ಥಾಪಿಸುವ ಪ್ರಯತ್ನಗಳಿಗೆ ಭಾರತ ಬೆಂಬಲ ನೀಡುತ್ತದೆ ಎಂದು ತಿಳಿಸಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !