ಕೊರೋನಾ ಆರೋಗ್ಯ ಕಾರ್ಯಕರ್ತರ ವಿಮಾ ಯೋಜನೆಯನ್ನು ವಿಸ್ತರಿಸಿದ ಕೇಂದ್ರ ಸರ್ಕಾರ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಕೊರೋನಾ ವಿರುದ್ಧದ ಹೋರಾಟದಲ್ಲಿ ಪಾಲ್ಗೊಂಡಿರುವ ಆರೋಗ್ಯ ಕಾರ್ಯಕರ್ತರಿಗೆ ನೀಡಲಾಗುತ್ತಿರುವ ವಿಮೆ ಸೌಲಭ್ಯವನ್ನು ಕೇಂದ್ರ ಸರ್ಕಾರ ವಿಸ್ತರಣೆ ಮಾಡಿದೆ.
ಈ ಕುರಿತು ಆದೇಶ ಹೊರಡಿಸಿದ ಕೇಂದ್ರ ಸರ್ಕಾರ, ಆರೋಗ್ಯ ಕಾರ್ಯಕರ್ತರಿಗೆ ನೀಡುತ್ತಿರುವ ವಿಮೆ ಸೌಲಭ್ಯವನ್ನು 180 ದಿನಗಳ ತನಕ ವಿಸ್ತರಣೆ ಮಾಡಲಾಗಿದೆ.
ಎಲ್ಲಾ ರಾಜ್ಯ/ ಕೇಂದ್ರಾಡಳಿತ ಪ್ರದೇಶಗಳ ಆರೋಗ್ಯ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿಗಳು, ಕಾರ್ಯದರ್ಶಿಗಳಿಗೆ ಏಪ್ರಿಲ್ 19ರಂದು ಈ ಕುರಿತು ಪತ್ರ ಬರೆಯಲಾಗಿದೆ. ವಿಮೆ ವಿಸ್ತರಣೆ ಮಾಡಿರುವ ಕುರಿತು ಪ್ರಚಾರದ ಮೂಲಕ ಮಾಹಿತಿ ನೀಡುವಂತೆಯೂ ಸೂಚಿಸಲಾಗಿದೆ.
ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಪ್ಯಾಕೇಜ್ (ಪಿಎಂಜಿಕೆಪಿ) ಮಾರ್ಚ್ 30, 2020ರಂದು ಆರಂಭಿಸಲಾಯಿತು. ಇದರ ಅಡಿಯೇ ವಿಮೆಯನ್ನು ನೀಡಲಾಗುತ್ತಿದೆ. ಯೋಜನೆ ಪ್ರಾರಂಭವಾದ ಬಳಿಕ ಕೋವಿಡ್ ಕರ್ತವ್ಯದಲ್ಲಿ ತೊಡಗಿದ್ದ 1905 ಆರೋಗ್ಯ ಕಾರ್ಯಕರ್ತರು ಮೃತಪಟ್ಟಿದ್ದಾರೆ. ಯೋಜನೆ ಅನ್ವಯ 50 ಲಕ್ಷದ ತನಕ ವಿಮೆ ನೀಡಲಾಗುತ್ತದೆ.
ಕೋವಿಡ್ ಕರ್ತವ್ಯದ ವೇಳೆ ಸಾವನ್ನಪ್ಪುವ ಆರೋಗ್ಯ ಕಾರ್ಯಕರ್ತರನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಸರ್ಕಾರ ಆರೋಗ್ಯ ಕಾರ್ಯಕರ್ತರಿಗೆ ವಿಮೆ ಘೋಷಣೆ ಮಾಡಿತ್ತು. ಈ ಯೋಜನೆ ಅಡಿ 22.12 ಲಕ್ಷ ಫಲಾನುಭವಿಗಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!