ಕಳೆದ 8-9 ವರ್ಷಗಳಲ್ಲಿ ಕೃಷಿ ವಲಯದ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಆದ್ಯತೆ: ಪ್ರಧಾನಿ ಮೋದಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೃಷಿ ಬಜೆಟ್‌ 5 ಪಟ್ಟು ವೃದ್ಧಿಸಿದ್ದು, (agriculture budget) 1.25 ಲಕ್ಷ ಕೋಟಿ ರೂ.ಗೆ ವೃದ್ಧಿಸಿದೆ. ತೈಲಬೀಜಗಳು ಮತ್ತು ಖಾದ್ಯ ತೈಲಕ್ಕೆ ಆಮದು ಅವಲಂಬನೆ ಕಡಿಮೆಯಾಗಿದೆ . ಈ ಮೂಲಕ ಕಳೆದ 8-9 ವರ್ಷಗಳಲ್ಲಿ ಕೃಷಿ ವಲಯದ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಆದ್ಯತೆ ನೀಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ತಿಳಿಸಿದ್ದಾರೆ.

ಕೃಷಿ ಮತ್ತು ಸಹಕಾರ ವಲಯದ ಪ್ರಮುಖರೊಡನೆ ಬಜೆಟ್‌ ಕುರಿತ ಸಂವಾದದಲ್ಲಿ ಭಾಗವಹಿಸಿ ಅವರು ಮಾತನಾಡಿದ ಅವರು, ನಾವು 2014ರಲ್ಲಿ ಅಧಿಕಾರಕ್ಕೆ ಬರುವುದಕ್ಕೆ ಮೊದಲು ಕೃಷಿ ಬಜೆಟ್‌ 25,000 ಕೋಟಿ ರೂ.ಗಿಂತಲೂ ಕಡಿಮೆ ಇತ್ತು. ಈಗ 1.25 ಲಕ್ಷ ಕೋಟಿ ರೂ.ಗೆ ಏರಿಕೆಯಾಗಿದೆ ಎಂದರು.

ಅದೇ ರೀತಿ ಕೇಂದ್ರ ಸರಕಾರ ಧವಸ ಧಾನ್ಯಗಳ ಉತ್ಪಾದನೆ ಹೆಚ್ಚಿಸಲು ಸರ್ಕಾರ ಸಮರೋಪಾದಿಯಲ್ಲಿ ಕ್ರಮಗಳನ್ನು ಕೈಗೊಂಡಿದೆ. ಭಾರತ ಅಡುಗೆ ಎಣ್ಣೆಯನ್ನು ಆಮದು ಮಾಡಿಕೊಳ್ಳಲು 1.5 ಲಕ್ಷ ಕೋಟಿ ರೂ. ಖರ್ಚು ಮಾಡುತ್ತಿದೆ. ಹೀಗಾಗಿ ದೇಶದಲ್ಲಿಯೇ ತೈಲ ಬೀಜಗಳ ಉತ್ಪಾದನೆಗೆ ಹೆಚ್ಚಿನ ಅವಕಾಶ ಇದೆ. ಬಜೆಟ್‌ ಕೃಷಿ ಸ್ಟಾರ್ಟಪ್‌ಗಳ ಅಭಿವೃದ್ಧಿಗೆ ಆದ್ಯತೆ ನೀಡಿದೆ. ಈಗ ಕೃಷಿ ಸ್ಟಾರ್ಟಪ್‌ಗಳ ಸಂಖ್ಯೆ 3,000ಕ್ಕೆ ಏರಿಕೆಯಾಗಿದೆ ಎಂದರು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!