ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇಂದ್ರ ಸರ್ಕಾರ ಕನ್ನಡಿಗರ ಪಾಲಿಗೆ ಕಿವುಡಾಗಿದೆ. ಅವರಿಂದ ನಿರೀಕ್ಷೆ ಮಾಡುವುದೇ ಇಲ್ಲ ಎಂದೇನಿಲ್ಲ. ನಿರೀಕ್ಷೆ ಮಾಡಿದರೂ ಅವು ಹುಸಿಯಾಗುತ್ತಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.
ಕೊಡಗಿನ ಭಾಗಮಂಡಲದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರದ ಬಜೆಟ್ ಮಂಡನೆಯಾಗುತ್ತಿದೆ. ಕೇಂದ್ರ ಸರ್ಕಾರ ಕನ್ನಡಿಗರ ಪಾಲಿಗೆ ಕಿವುಡಾಗಿದೆ. ಅವರಿಂದ ನಿರೀಕ್ಷೆ ಮಾಡುವುದೇ ಇಲ್ಲ ಎಂದೇನಿಲ್ಲ. ನಿರೀಕ್ಷೆ ಮಾಡಿದರೂ ಅವು ಹುಸಿಯಾಗುತ್ತಿವೆ.
ಒಕ್ಕೂಟ ವ್ಯವಸ್ಥೆಯಲ್ಲಿ ಕೇಂದ್ರ ಸರ್ಕಾರಕ್ಕೆ ತೆರಿಗೆ ಕೊಡುತ್ತೇವೆ. ತೆರಿಗೆ ಹಂಚಿಕೆಯಲ್ಲಿ ಕಡಿಮೆ ಅನುದಾನ ಬರುತ್ತಿದೆ, ಕೇಂದ್ರ ಪುರಸ್ಕೃತ ಯೋಜನೆಗಳಲ್ಲಿ ರಾಜ್ಯಕ್ಕೆ ಅನುದಾನ ಕಡಿಮೆಯಾಗಿದೆ, ಕೇಂದ್ರದಿಂದ ಅನುದಾನ ಬರುತ್ತಿಲ್ಲ ಎಂದು ಶಾಸಕರು, ಸಂಸದರು, ಸಚಿವರು ದೆಹಲಿಯಲ್ಲಿಯೇ ಪ್ರತಿಭಟನೆ ಮಾಡಿದೆವು. ಕೇಂದ್ರ ಬಜೆಟ್ ನಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ಅನುದಾನ ನೀಡುವುದಾಗಿ ಬಜೆಟ್ ನಲ್ಲಿ ಘೋಷಣೆ ಮಾಡಿದ್ದರು. ಇಂದಿನವರೆಗೂ ಒಂದು ರೂಪಾಯಿ ಬಿಡುಗಡೆಯಾಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.