ರಾಜ್ಯದಲ್ಲಿ ಕೇಂದ್ರ ಸರ್ಕಾರದ ಸೂಚನೆಗಳ ಪಾಲನೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪಾಕಿಸ್ತಾನದ ಮೇಲೆ ಭಾರತ ದಾಳಿಮಾಡಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕೇಂದ್ರ ಸರ್ಕಾರದ ಸೂಚನೆಯಂತೆ ಎಲ್ಲೆಡೆ ಅಣುಕು ಕವಾಯತು ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅಣೆಕಟ್ಟುಗಳ ಸುರಕ್ಷತೆಯ ದೃಷ್ಟಿಯಲ್ಲಿ ಎಲ್ಲೆಡೆ ಎಚ್ಚರಿಕೆ ನೀಡಲಾಗಿದ್ದು, ಯಾವ ಘಳಿಗೆಯಲ್ಲಿ ಏನಾದರೂ ಆಗಬಹುದು ಎಂದು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದರು.

ಮುಜರಾಯಿ ಇಲಾಖೆ ದೇವಾಲಯಗಳಲ್ಲಿ ಪೂಜೆ ಮಾಡುವ ಬಗ್ಗೆ ಸಚಿವ ರಾಮಲಿಂಗಾರೆಡ್ಡಿಯವರೊಂದಿಗೆ ಮಾತನಾಡಿ ಕ್ರಮ ತೆಗೆದುಕೊಂಡಿದ್ದಾರೆ ಎಂದರು.

ಪಾಕಿಸ್ತಾನದ ಪ್ರಜೆಗಳನ್ನು ಗಡಿಪಾರು ಮಾಡಿಲ್ಲ ಎಂದು ಬಿಜೆಪಿ ಆರೋಪಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಗಡಿಪಾರು ಮಾಡಲಾಗಿದೆ. ಮೈಸೂರಿನಲ್ಲಿ ಇರುವವರು ನ್ಯಾಯಾಲಯದ ಮೊರೆ ಹೋಗಿದ್ದಾರೆ. ಅಂಥವರು ಮಾತ್ರ ಉಳಿದುಕೊಂಡಿರುವುದು ಬಿಟ್ಟರೆ ಬಹುತೇಕ ಎಲ್ಲರೂ ಗಡೀಪಾರು ಆಗಿದ್ದಾರೆ, ಎಷ್ಟು ಜನ ಉಳಿದಿದ್ದಾರೆ ಎಂಬ ಮಾಹಿತಿ ಇಲ್ಲ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!