ಅಡುಗೆ ಎಣ್ಣೆ ದರ ಮತ್ತಷ್ಟು ಇಳಿಕೆಗೆ ಕೇಂದ್ರ ಸರ್ಕಾರ ಸೂಚನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸೂರ್ಯಕಾಂತಿ ಎಣ್ಣೆ, ತಾಳೆ ಎಣ್ಣೆ ಮತ್ತು ಸೋಯಾಬೀನ್ ಎಣ್ಣೆಯಂತಹ ಖಾದ್ಯ ತೈಲಗಳಿಗೆ ದರ ಮತ್ತಷ್ಟು ಇಳಿಕೆಗೆ ಕೇಂದ್ರ ಸರ್ಕಾರ ಖಾದ್ಯ ತೈಲ ಕಂಪನಿಗಳಿಗೆ ನಿರ್ದೇಶನ ನೀಡಿದೆ.

ಪ್ರಸ್ತುತ ವಿಶ್ವ ಮಾರುಕಟ್ಟೆಯಲ್ಲಿ ಅಡುಗೆ ಎಣ್ಣೆಯ ಬೆಲೆಗಳು ಕುಸಿಯುತ್ತಿವೆ. ಆದರೆ ದೇಶೀಯ ಮಾರುಕಟ್ಟೆಯಲ್ಲಿ ಅಡುಗೆ ಎಣ್ಣೆ ಬೆಲೆ ಕುಸಿದಿಲ್ಲ. ಕಳೆದ ವರ್ಷ ಡಿಸೆಂಬರ್‌ನಲ್ಲಿ ಬೆಲೆ ಸ್ವಲ್ಪ ಕುಸಿದಿತ್ತು. ಜನವರಿಯಲ್ಲಿ ಅಡುಗೆ ಎಣ್ಣೆ ಬೆಲೆ ಮತ್ತೆ ಏರಿಕೆಯಾಗಿದೆ. ಆದ್ದರಿಂದ, ಕಡಿಮೆ ತೈಲ ಬೆಲೆಯ ಲಾಭವನ್ನು ಗ್ರಾಹಕರಿಗೆ ವರ್ಗಾಯಿಸಬೇಕು. ಜಾಗತಿಕ ಬೆಲೆಗೆ ಅನುಗುಣವಾಗಿ ತೈಲ ಬೆಲೆಯನ್ನು ಕಡಿಮೆ ಮಾಡುವಂತೆ ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವಾಲಯ ತೈಲ ಕಂಪನಿಗಳಿಗೆ ಸೂಚಿಸಿದೆ.

ತೈಲ ಕಂಪನಿಗಳ ಬೆಲೆ ಇಳಿಕೆಯ ವೈಫಲ್ಯದ ಬಗ್ಗೆಯೂ ಸಚಿವಾಲಯ ಅಸಮಾಧಾನ ವ್ಯಕ್ತಪಡಿಸಿದೆ. ಲೋಕಸಭೆ ಚುನಾವಣೆ ಸಮೀಪಿಸುತ್ತಿರುವಂತೆಯೇ ಖಾದ್ಯ ತೈಲ ಬೆಲೆಯನ್ನು ನಿಯಂತ್ರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಅಡುಗೆ ಎಣ್ಣೆ ಬೆಲೆ ಡಿಸೆಂಬರ್‌ನಲ್ಲಿ ಶೇ 10ರಷ್ಟು ಕುಸಿದಿದೆ ಆದರೆ ಜನವರಿಯಲ್ಲಿ ಶೇ 8ರಷ್ಟು ಏರಿಕೆಯಾಗಿದೆ. ಸರಕಾರ ಒತ್ತಡ ಹೇರಿದರೆ ಶೇ.3-4ರಷ್ಟು ಬೆಲೆ ಇಳಿಕೆಯಾಗಬಹುದು ಎನ್ನಲಾಗುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!