ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಪ್ರಸಕ್ತ ಸಾಲಿನ ಮುಂಗಾರು ಹಾಂಗಾಮಿನಲ್ಲಿ ಈಗಾಗಲೇ 22,215 ಮೆಟ್ರಿಕ್ ಟನ್ ಹೆಸರುಕಾಳನ್ನು ಬೆಂಬಲ ಬೆಲೆ ಅಡಿಯಲ್ಲಿ ಖರೀದಿಸಿದ್ದು, ಕರ್ನಾಟಕದಿಂದ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಹೆಸರು ಕಾಳು ಖರೀದಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ ಎಂದು ಕೇಂದ್ರ ಆಹಾರ ಸಾರ್ವಜನಿಕ ಸರಬರಾಜು ಸಚಿವ ಪ್ರಹ್ಲಾದ್ ಜೋಶಿ ಹೇಳಿದರು.
ರಾಜ್ಯದ ರೈತರು ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಹೆಸರು ಕಾಳು ಬೆಳೆದಿದ್ದು ಹೆಚ್ಚುವರಿಯಾಗಿ ಸುಮಾರು 16,105 ಸಾವಿರ ಮೆಟ್ರಿಕ್ ಟನ್ ಹೆಸರು ಖರೀದಿಸಲು ಕೇಂದ್ರ ಬೆಂಬಲ ಬೆಲೆ ಅಡಿಯಲ್ಲಿ ಖರೀದಿಸಲು ಮುಂದಾಗಿದೆ. ಇದರಿಂದಾಗಿ ಒಟ್ಟಾರೆಯಾಗಿ 38.320 ಮೆಟ್ರಿಕ್ ಟನ್ ಖರೀದಿಸಲು ಕೇಂದ್ರ ಒಪ್ಪಿಗೆ ನೀಡಿದೆ. ರಾಜ್ಯದ ರೈತರ ಹಿತದೃಷ್ಟಿಯಿಂದ ಪ್ರಹ್ಲಾದ್ ಜೋಶಿಯವರು ಈ ಕುರಿತು ಕೇಂದ್ರ ಕೃಷಿ ಸಚಿವರಿಗೆ ಮನವಿ ಮಾಡಿದ್ದರು.
ಈಗಾಗಲೇ ರಾಜ್ಯದಿಂದ ಒಟ್ಟು 22,215 ಮೆಟ್ರಿಕ್ ಟನ್ ಹೆಸರುಕಾಳು ಬೆಂಬಲ ಬೆಲೆ ಯೋಜನೆಯಲ್ಲಿ ಖರೀದಿಸಲಾಗಿದೆ. ಹೆಚ್ಚುವರಿಯಾಗಿ ರೈತರು ಬೆಳೆದಿರುವ ಸುಮಾರು 16,105 ಮೆಟ್ರಿಕ್‌ಟನ್ ಖರೀದಿಸಲು ಕ್ರಮ ಕೈಗೊಳ್ಳಲಾಗಿದೆ. ಹೀಗಾಗಿ ಕರ್ನಾಟಕದಲ್ಲಿ ಬೆಂಬಲ ಬೆಲೆ ಯೋಜನೆಯಲ್ಲಿ ಖರೀದಿಸಲಾಗುವ ಹೆಸರುಕಾಳಿಗೆ ಎಫ್ಎಕ್ಯೂ ಗುಣಮಟ್ಟದ ಮಾನದಂಡದಲ್ಲಿ ಕೇಂದ್ರ ಸಂಬಂಧಿತ ಸಂಸ್ಥೆಗಳು ಖರೀದಿ ಪ್ರಕ್ರಿಯೆ ಆರಂಭಿಸಲಿವೆ ಎಂದರು.