February 12, 2026
Thursday, February 12, 2026
spot_img

ಹೆಬ್ಬಾಳ–ಸರ್ಜಾಪುರ ಮೆಟ್ರೋ ಯೋಜನೆಗೆ ಬ್ರೇಕ್‌ ಹಾಕಿದ ಕೇಂದ್ರ ಸರ್ಕಾರ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಹೆಬ್ಬಾಳ-ಸರ್ಜಾಪುರ ಮೆಟ್ರೋ ಯೋಜನೆಗೆ ಕೇಂದ್ರ ಸರ್ಕಾರ ಬ್ರೇಕ್‌ ಹಾಕಿದೆ.

ಈ ಮೆಟ್ರೋ ಲೈನ್‌ಗೆ ಸಂಬಂಧಿಸಿದ ಡಿಪಿಆರ್‌ ಅನುಮೋದನೆಗೆ ಕೇಂದ್ರ ಸರ್ಕಾರ ನಿರಾಕರಿಸಿದೆ.

ಹೆಬ್ಬಾಳ-ಸರ್ಜಾಪುರ ಮೆಟ್ರೋ (ರೆಡ್ ಲೈನ್) ಹಾಗೂ ಡಬ್ಬಲ್ ಡೆಕ್ಕರ್ ಫ್ಲೈಓವರ್ ಯೋಜನೆಗೆ ರಾಜ್ಯ ಸರ್ಕಾರ ಡಿಪಿಆರ್ ಸಲ್ಲಿಸಿತ್ತು. ಡಬಲ್ ಡೆಕ್ಕರ್ ವ್ಯವಸ್ಥೆಯಿಂದ ಮೆಟ್ರೋ ಪ್ರಯಾಣಿಕರ ಸಂಖ್ಯೆ ಕಡಿಮೆಯಾಗುವ ಸಾಧ್ಯತೆ ಇದೆ ಎಂಬ ಅಭಿಪ್ರಾಯವನ್ನು ಕೇಂದ್ರ ಸರ್ಕಾರ ವ್ಯಕ್ತಪಡಿಸಿದೆ.

ಈ ಮೆಟ್ರೋ ಕಾರಿಡಾರ್‌ಗೆ ಕೇಂದ್ರ ಸರ್ಕಾರ ತಾತ್ಕಾಲಿಕವಾಗಿ ಅನುಮೋದನೆ ಸ್ಥಗಿತಗೊಳಿಸಿ, ಯೋಜನೆಯನ್ನು ಮರುಪರಿಶೀಲನೆಗೆ ಕಳುಹಿಸಿದೆ. ಯೋಜನಾ ವೆಚ್ಚ ಅಂದಾಜಿಗಿಂತ ಹೆಚ್ಚಾಗಿದೆ. ಅಲ್ಲದೆ ಡಬಲ್‌ ಡೆಕ್ಕರ್‌ ಸಂಯೋಜನೆಯಿಂದ ಯೋಜನೆಯ ಉದ್ದೇಶಕ್ಕೆ ಧಕ್ಕೆ ಉಂಟಾಗಬಹುದು ಎಂದು ಮರು ಪರಿಶೀಲನೆಗೆ ಕಳುಹಿಸಲಾಗಿದೆ ಎನ್ನಲಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !