March 10, 2026
Tuesday, March 10, 2026
spot_img

ಎಲ್‌ಪಿಜಿ ಕೊರತೆ ನೀಗಿಸಲು ಕೇಂದ್ರ ಸರ್ಕಾರ ಸಜ್ಜು: ಸಮಸ್ಯೆ ಬಗೆಹರಿಸಲು ಸಮಿತಿ ರಚನೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ದೇಶಾದ್ಯಂತ ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆ ಹೆಚ್ಚಾಗಿದೆ. ಹೋಟೆಲ್‌ ಮತ್ತು ರೆಸ್ಟೋರೆಂಟ್ ಉದ್ದಿಮೆಗಳು ಸ್ಥಗಿತಗೊಳ್ಳುವ ಭೀತಿ ಎದುರಿಸುತ್ತಿವೆ.

ಇದರ ನಡುವೆ ಪೆಟ್ರೋಲಿಯಂ ಸಚಿವಾಲಯವು ತೈಲ ಮಾರುಕಟ್ಟೆ ಕಂಪನಿಗಳ ಮೂವರು ಕಾರ್ಯನಿರ್ವಾಹಕ ನಿರ್ದೇಶಕ ಒಳಗೊಂಡ ಉನ್ನತ ಮಟ್ಟದ ಸಮಿತಿಯನ್ನು ರಚಿಸಿದೆ.ಸರ್ಕಾರವು ತೈಲ ಮಾರುಕಟ್ಟೆ ಕಂಪನಿಗಳಿಗೆ ರೆಸ್ಟೋರೆಂಟ್ ಸಂಘಗಳೊಂದಿಗೆ ಚರ್ಚಿಸಲು ನಿರ್ದೇಶಿಸಿದೆ.

ವಾರ್ಷಿಕವಾಗಿ ಭಾರತವು 31.3 ಮಿಲಿಯನ್ ಟನ್ ಎಲ್‌ಪಿಜಿ ಬಳಕೆ ಮಾಡುತ್ತಿದ್ದು, ಇದರಲ್ಲಿ ಶೇ. 87ರಷ್ಟು ಭಾಗ ಮನೆ ಬಳಕೆಗೆ ಉಪಯೋಗವಾಗುತ್ತಿದೆ. ಉಳಿದ ಭಾಗವನ್ನು ಹೋಟೆಲ್ ಮತ್ತು ಕೈಗಾರಿಕೆಗಳಿಗೆ ಬಳಸಲಾಗುತ್ತಿದೆ.

ಈಗಾಗಲೇ ಮುಂಬೈ ಮತ್ತು ಬೆಂಗಳೂರಿನಂತಹ ನಗರಗಳಲ್ಲಿ ಅಡುಗೆ ಅನಿಲ ಸಿಗದೆ ಹೋಟೆಲ್ ಕಾರ್ಯಾಚರಣೆಗಳ ಮೇಲೆ ಪರಿಣಾಮ ಬೀರಿದೆ. ಅನಿಲದ ಅಕ್ರಮ ದಾಸ್ತಾನು ಮತ್ತು ಕಾಳದಂಧೆಯನ್ನು ತಡೆಯಲು ಸರ್ಕಾರವು ಸಿಲಿಂಡರ್ ಬುಕಿಂಗ್ ಅವಧಿಯನ್ನು 21ರಿಂದ 25 ದಿನಗಳಿಗೆ ವಿಸ್ತರಿಸಿದೆ. ಶೀಘ್ರವೇ ಎಲ್‌ಪಿಜಿ ಸಿಲಿಂಡರ್ ಪೂರೈಕೆ ಸುಗಮವಾಗದಿದ್ದರೆ ಹೋಟೆಲ್‌ ಉದ್ಯಮಕ್ಕೆ ದೊಡ್ಡ ಪೆಟ್ಟು ಬೀಳಲಿದೆ ಎಂದು ಹೊಟೇಲ್ ಅಸೋಸಿಯೇಷನ್‌ಗಳು ಎಚ್ಚರಿಸಿವೆ.

ಜಾಗತಿಕ ಇಂಧನ ಮಾರುಕಟ್ಟೆಗಳು ಏರಿಳಿತವನ್ನು ಕಾಣುತ್ತಿರುವ ಸಮಯದಲ್ಲಿ, ಮನೆಗಳಿಗೆ ಎಲ್‌ಪಿಜಿ ಸಿಲಿಂಡರ್‌ಗಳ ಲಭ್ಯತೆಯನ್ನು ಖಚಿತಪಡಿಸಿಕೊಳ್ಳುವುದು ಸರ್ಕಾರದ ಪ್ರಮುಖ ಆದ್ಯತೆಯಾಗಿದೆ. ಆಸ್ಪತ್ರೆಗಳು ಮತ್ತು ಶಿಕ್ಷಣ ಸಂಸ್ಥೆಗಳಂತಹ ಅಗತ್ಯ ದೇಶೀಯವಲ್ಲದ ವಲಯಗಳಿಗೆ ಅಗತ್ಯವಿರುವಂತೆ ಎಲ್‌ಪಿಜಿ ಸರಬರಾಜುಗಳನ್ನು ಒದಗಿಸುವುದನ್ನು ಮುಂದುವರಿಸಲಾಗುವುದು ಎಂದು ಕಂಪನಿಗಳು ತಿಳಿಸಿವೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !