ಕೇಂದ್ರ ಸರ್ಕಾರದಿಂದ ರಾಜ್ಯಗಳ ತೆರಿಗೆ ಪಾಲು ಬಿಡುಗಡೆ: ಕರ್ನಾಟಕಕ್ಕೆ ಎಷ್ಟು ಸಿಕ್ತು?

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಕೇಂದ್ರ ಸರ್ಕಾರ ರಾಜ್ಯಗಳಿಗೆ ಸಂತಸದ ಸುದ್ದಿ ನೀಡಿದೆ.ರಾಜ್ಯಗಳ ತೆರಿಗೆ ಪಾಲನ್ನುಇಂದು ಬಿಡುಗಡೆ ಮಾಡಿದ್ದು, ಒಟ್ಟು 72,961.21 ಕೋಟಿ ರೂ. ಹಂಚಿಕೆ ಮಾಡಲಾಗಿದೆ.

ಈ ವರ್ಷದ ನವೆಂಬರ್ ತಿಂಗಳ ನ. 10ರಂದು ಬಿಡುಗಡೆ ಮಾಡಬೇಕಿದ್ದ ಈ ಮೊತ್ತವನ್ನು ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಮೂರು ದಿನಗಳ ಮುಂಚಿತವಾಗಿಯೇ ಬಿಡುಗಡೆ ಮಾಡಿದೆ. ಇದು ರಾಜ್ಯಗಳಲ್ಲಿ ಹಬ್ಬದ ಸಂಭ್ರಮವನ್ನು ಹೆಚ್ಚಿಸಲಿದೆ ಎಂದು ಕೇಂದ್ರ ಸರ್ಕಾರ ಹೇಳಿಕೊಂಡಿದೆ.

ಕೇಂದ್ರ ಸರ್ಕಾರ 28 ರಾಜ್ಯಗಳಿಗೆ ಒಟ್ಟು 72,961.21 ಕೋಟಿ ರೂ. ಬಿಡುಗಡೆ ಮಾಡಿದ್ದು, ಆ ಪೈಕಿ ಕರ್ನಾಟಕಕ್ಕೆ 2,660.88 ಕೋಟಿ ರೂ. ನೀಡಲಾಗಿದೆ. ಉತ್ತರಪ್ರದೇಶ, ಬಿಹಾರ, ಪಶ್ಚಿಮ ಬಂಗಾಳ, ಮಧ್ಯಪ್ರದೇಶ ಅತಿ ಹೆಚ್ಚು ತೆರಿಗೆ ಪಾಲು ಪಡೆದ ರಾಜ್ಯಗಳ ಪೈಕಿ ಮುಂಚೂಣಿಯಲ್ಲಿವೆ.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!