ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಪಾಕಿಸ್ತಾನ ಕ್ರಿಕೆಟ್ ತಂಡದ ಮಾಜಿ ನಾಯಕ ಶಾಹಿದ್ ಅಫ್ರಿದಿ ವಿರುದ್ಧ ಮೋದಿ ಸರ್ಕಾರ ಕ್ರಮ ಕೈಗೊಂಡಿದೆ. ಅಫ್ರಿದಿ ಅವರ ಯೂಟ್ಯೂಬ್ ಚಾನೆಲ್ ಅನ್ನು ಸಹ ನಿಷೇಧಿಸಲಾಗಿದೆ.
ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಾರತದ ವಿರುದ್ಧ ವಿಷ ಕಾರುತ್ತಿದ್ದ ಅಫ್ರಿದಿ ಭಾರತೀಯ ಸೇನೆಯ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತಿದ್ದರು. ಇದೀಗ ಕೇಂದ್ರ ಸರ್ಕಾರ ಶಾಹಿದ್ ಅಫ್ರಿದಿ ವಿರುದ್ಧ ಕ್ರಮ ಕೈಗೊಂಡಿದೆ .
ಶಾಹಿದ್ ಅಫ್ರಿದಿ ಅವರಿಗೂ ಮುನ್ನ ಮತ್ತೊಬ್ಬ ಸ್ಟಾರ್ ಕ್ರಿಕೆಟಿಗ ಶೊಯೇಬ್ ಅಖ್ತರ್ ಅವರ ಯೂಟ್ಯೂಬ್ ಚಾನೆಲ್ ಅನ್ನು ಸಹ ಭಾರತದಲ್ಲಿ ನಿಷೇಧಿಸಲಾಗಿತ್ತು. ಲಕ್ಷಾಂತರ ಚಂದಾದಾರರನ್ನು ಹೊಂದಿರುವ ಅಫ್ರಿದಿ ಭಾರತದಿಂದ ಸಾಕಷ್ಟು ವೀಕ್ಷಣೆಗಳನ್ನು ಪಡೆಯುತ್ತಿದ್ದರು. ಆದರೀಗ ಭಾರತ ಸರ್ಕಾರದ ಕ್ರಮ ಕೈಗೊಂಡಿರುವ ಕಾರಣ ಅಫ್ರಿದಿಗೆ ನಷ್ಟವಾಗಿದೆ.
ಭಾರತ ಸರ್ಕಾರವು ಅನೇಕ ಪಾಕಿಸ್ತಾನಿ ಯೂಟ್ಯೂಬ್ ಚಾನೆಲ್‌ಗಳ ವಿರುದ್ಧ ಕ್ರಮ ಕೈಗೊಂಡಿದೆ. ಶಾಹಿದ್ ಅಫ್ರಿದಿಗೂ ಮೊದಲು ಪಾಕಿಸ್ತಾನದ 16 ಜನಪ್ರಿಯ ಯೂಟ್ಯೂಬ್ ಚಾನೆಲ್‌ಗಳನ್ನು ನಿಷೇಧಿಸಿತ್ತು. ಇದರಲ್ಲಿ ಶೋಯೆಬ್ ಅಖ್ತರ್ ಮತ್ತು ಬಸಿತ್ ಅಲಿ ಅವರ ಯೂಟ್ಯೂಬ್ ಚಾನೆಲ್‌ಗಳು ಸಹ ಸೇರಿವೆ.