ಸುಪ್ರೀಂ ಕೋರ್ಟ್‌ಗೆ ಐವರು ಜಡ್ಜ್‌ಗಳ ನೇಮಕಕ್ಕೆ ಕೇಂದ್ರ ಸರಕಾರ ಅಸ್ತು!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಐವರು ನ್ಯಾಯಮೂರ್ತಿಗಳನ್ನು ಸುಪ್ರೀಂ ಕೋರ್ಟ್‌ ಜಡ್ಜ್‌ಗಳನ್ನಾಗಿ ನೇಮಿಸಲು (Judges Appointment) ಕೇಂದ್ರ ಸರ್ಕಾರವು ಅನುಮೋದನೆ ನೀಡಿದೆ.

ಕೆಲವು ದಿನಗಳ ಹಿಂದೆ ಕೊಲಿಜಿಯಂ ಶಿಫಾರಸುಗಳಿಗೆ ಅನುಮೋದನೆ ನೀಡುವ ಕುರಿತು ಸುಪ್ರೀಂ ಕೋರ್ಟ್‌ ಹಾಗೂ ಕೇಂದ್ರ ಸರ್ಕಾರದ ಮಧ್ಯೆ ಬಿಕ್ಕಟ್ಟು ಸೃಷ್ಟಿಯಾಗಿರುವ ಬೆನ್ನಲ್ಲೇ ಇದೀಗ ಕೇಂದ್ರದ ಈ ನಿರ್ಧಾರ ನ್ಯಾಯಾಂಗ ಹಾಗೂ ಕೇಂದ್ರದ ನಡುವಿನ ಬಿಕ್ಕಟ್ಟು ತುಸು ತಣ್ಣದಾಗಿಸಿದೆ .

ಸುಪ್ರೀಂ ಕೋರ್ಟ್‌ನ ಕೊಲಿಜಿಯಂ ಶಿಫಾರಸಿನ ಅನ್ವಯ ಐವರು ನ್ಯಾಯಮೂರ್ತಿಗಳ ನೇಮಕಕ್ಕೆ ಅನುಮೋದನೆ ಸಿಕ್ಕಿದೆ. ರಾಜಸ್ಥಾನ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಪಂಕಜ್‌ ಮಿತ್ತಲ್‌, ಪಟನಾ ಮುಖ್ಯ ನ್ಯಾ.ಸಂಜಯ್‌ ಕರೋಲ್‌, ಮಣಿಪುರ್‌ ಹೈಕೋರ್ಟ್‌ ಚೀಫ್‌ ಜಸ್ಟಿಸ್‌ ಪಿ.ವಿ.ಸಂಜಯ್‌ ಕುಮಾರ್‌, ಪಟನಾ ಹೈಕೋರ್ಟ್‌ ನ್ಯಾಯಮೂರ್ತಿ ಅಹ್ಸಾನುದ್ದೀನ್‌ ಅಮಾನುಲ್ಲಾ ಹಾಗೂ ಅಲಹಾಬಾದ್‌ ಹೈಕೋರ್ಟ್‌ ನ್ಯಾಯಮೂರ್ತಿ ಮನೋಜ್‌ ಮಿಶ್ರಾ ಅವರು ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿಗಳಾಗಿ ನೇಮಕಗೊಂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!