ಹೊಸದಿಗಂತ ಡಿಜಿಟಲ್ ಡೆಸ್ಕ್:
ರೈತರಿಂದ ಹೆಚ್ಚುವರಿ 2 ಲಕ್ಷ ಟನ್ ಈರುಳ್ಳಿ ಖರೀದಿಸಲು ಮತ್ತು ವಿವಿಧ ಪ್ರದೇಶಗಳಲ್ಲಿ NCCF ಮತ್ತು NAFED ಮೂಲಕ ಪ್ರತಿ ಕೆಜಿಗೆ 25 ರೂಪಾಯಿಗಳ ಸಬ್ಸಿಡಿ ದರದಲ್ಲಿ ಮಾರಾಟ ಮಾಡಲು ಕೇಂದ್ರ ಸರಕಾರ ಮುಂದಾಗಿದೆ.
ಈ ಕುರಿತು ಮಾಹಿತಿ ನೀಡಿದ ಗ್ರಾಹಕರ ವ್ಯವಹಾರಗಳು ಮತ್ತು ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವ ಪಿಯೂಷ್ ಗೋಯಲ್, ಈರುಳ್ಳಿ ಉತ್ಪಾದಿಸುವ ರೈತರ ಹಿತಾಸಕ್ತಿ ಕಾಪಾಡಲು ಸರ್ಕಾರ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಗ್ರಾಹಕರನ್ನು ರಕ್ಷಿಸಲು ಈರುಳ್ಳಿ ಬೆಲೆಯನ್ನು ಕಡಿಮೆ ಮಾಡಲು ಪ್ರಯತ್ನಿಸಲಾಗಿದೆ ಎಂದು ಹೇಳಿದರು.
ಇಲ್ಲಿಯವರೆಗೆ ಮೂರು ಲಕ್ಷ ಮೆಟ್ರಿಕ್ ಟನ್ ಈರುಳ್ಳಿಯನ್ನು ಖರೀದಿಸಲಾಗಿದೆ. ಹೆಚ್ಚುವರಿ ಎರಡು ಲಕ್ಷ ಮೆಟ್ರಿಕ್ ಟನ್‌ಗಳ ಖರೀದಿಗೆ ಈಗಾಗಲೇ ಪ್ರಕ್ರಿಯೆ ಪ್ರಾರಂಭವಾಗಿದೆ. ಮುಂದಿನ ದಿನಗಳಲ್ಲಿ ಅಗತ್ಯವಿದ್ದಲ್ಲಿ ಹೆಚ್ಚುವರಿಯಾಗಿ ಎರಡು ಲಕ್ಷ ಮೆಟ್ರಿಕ್ ಟನ್ ಖರೀದಿಸಲಾಗುವುದು ಎಂದರು.
ಪ್ರತಿ ಕ್ವಿಂಟಲ್‌ಗೆ 2410 ರೂಪಾಯಿ ದರದಲ್ಲಿ ಈರುಳ್ಳಿ ಖರೀದಿ ಮಾಡಲಾಗುತ್ತಿದೆ. ರೈತರು ತಮ್ಮ ಉತ್ಪನ್ನಗಳನ್ನು ಈ ಬೆಲೆಗೆ ಮಾರಾಟ ಮಾಡುವಂತೆ ಸಚಿವರು ತಿಳಿಸಿದ್ದಾರೆ.
ಅದೇ ರೀತಿ ಚಿಲ್ಲರೆ ಮಾರಾಟ ಮಳಿಗೆಗಳು ಮತ್ತು ಎನ್‌ಸಿಸಿಎಫ್‌ನ ಮೊಬೈಲ್ ವ್ಯಾನ್‌ಗಳ ಮೂಲಕ ಗ್ರಾಹಕರಿಗೆ ಪ್ರತಿ ಕಿಲೋಗ್ರಾಂಗೆ 25 ರೂಪಾಯಿಗಳ ಸಬ್ಸಿಡಿ ದರದಲ್ಲಿ ಈರುಳ್ಳಿ ಲಭ್ಯವಾಗುವಂತೆ ಮಾಡಲಾಗುತ್ತಿದೆ ಎಂದು ಹೇಳಿದರು.