Monday, October 20, 2025

ಸಿಂಧೂ ನದಿ ವಿಚಾರದಲ್ಲಿ ಕೇಂದ್ರ ಸರ್ಕಾರ ಮಾಸ್ಟರ್ ಪ್ಲಾನ್: ಪಾಕಿಸ್ತಾನದ ಕಥೆ ಮುಂದೇನು?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸಿಂಧೂ ನದಿ ನೀರನ್ನು ಈಶಾನ್ಯ ರಾಜ್ಯಗಳಿಗೆ ಹರಿಸಲು ಕೇಂದ್ರ ಸರ್ಕಾರ ಯೋಜಿಸಿದೆ. 2029ರ ಚುನಾವಣೆಗೂ ಮುನ್ನ ಯೋಜನೆ ಪೂರ್ಣಗೊಳಿಸಲು ಕೇಂದ್ರ ಮುಂದಾಗಿದೆ.

ಕಳೆದ ಶುಕ್ರವಾರ ಕೇಂದ್ರದ ಹಿರಿಯ ಸಚಿವ ಸಭೆಯಲ್ಲಿ ಈ ಸಂಬಂಧ ಡಿಪಿಆರ್ ಸಿದ್ಧಪಡಿಸಲು ಒಪ್ಪಿಗೆ ಸೂಚಿಸಲಾಗಿದೆ. ಮುಂದಿನ ವರ್ಷದಲ್ಲಿ ವಿಸ್ತೃತ ಯೋಜನಾ ವರದಿ ನೀಡಲು ಎಲ್ ಆ್ಯಂಡ್ ಟಿ ಕಂಪನಿಗೆ ಸೂಚನೆ ನೀಡಲಾಗಿದೆ.

ಉತ್ತರ ರಾಜ್ಯಗಳ ನೀರಿನ ಬೇಡಿಕೆಗಳನ್ನು ಪೂರೈಸಲು ಭಾರತ ಸಿಂಧೂ ನದಿ ವ್ಯವಸ್ಥೆಯಲ್ಲಿ ಬೃಹತ್ ಬದಲಾವಣೆಗಳನ್ನು ಮಾಡಲು ಸಜ್ಜಾಗಿದೆ. ಪಾಕಿಸ್ತಾನದೊಂದಿಗಿನ ಸಿಂಧೂ ಜಲ ಒಪ್ಪಂದವನ್ನು ಸ್ಥಗಿತಗೊಳಿಸಿದ ನಂತರ ಕೇಂದ್ರ ಈ ಕಾರ್ಯತಂತ್ರ ರೂಪಿಸಿದೆ.

error: Content is protected !!