ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಗ್ನಿ ದುರಂತದಲ್ಲಿ ಗಾಯಗೊಂಡವರಿಗೆ ನೆರವು ನೀಡುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ (MoS MEA) ಕೀರ್ತಿ ವರ್ಧನ್ ಸಿಂಗ್ ಅವರಿಗೆ ತುರ್ತಾಗಿ ಕುವೈತ್ ಗೆ ತೆರಳುವಂತೆ ಸೂಚಿಸಿದ್ದಾರೆ .
ಈ ಕುರಿತು ವಿದೇಶಾಂಗ ವ್ಯವಹಾರಗಳ ಸಚಿವಾಲಯ ವಕ್ತಾರ ರಣಧೀರ್ ಜೈಸ್ವಾಲ್ ಮಾಹಿತಿ ನೀಡಿದ್ದು, ಈ ದುರದೃಷ್ಟಕರ ಘಟನೆಯಲ್ಲಿ ಸಾವನ್ನಪ್ಪಿದವರ ಮೃತದೇಹಗಳನ್ನು ಶೀಘ್ರವಾಗಿ ಸ್ವದೇಶಕ್ಕೆ ತರಲು ಸಿಂಗ್ ಸ್ಥಳೀಯ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಲಿದ್ದಾರೆ ಎಂದು ಹೇಳಿದ್ದಾರೆ.
ಪ್ರಧಾನಿ ಮೋದಿ ಅವರ ನಿರ್ದೇಶನದಂತೆ ಅಗ್ನಿ ದುರಂತದಲ್ಲಿ ಗಾಯಗೊಂಡವರಿಗೆ ಸಹಾಯ ಮಾಡಲು ಮತ್ತು ಈ ದುರದೃಷ್ಟಕರ ಘಟನೆಯಲ್ಲಿ ಸಾವನ್ನಪ್ಪಿದವರ ಮೃತದೇಹಗಳನ್ನು ಶೀಘ್ರವಾಗಿ ಸ್ವದೇಶಕ್ಕೆ ಹಿಂದಿರುಗಿಸಲು ಸ್ಥಳೀಯ ಅಧಿಕಾರಿಗಳೊಂದಿಗೆ ಸಮನ್ವಯಗೊಳಿಸಲು ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವರು ತುರ್ತಾಗಿ ಕುವೈತ್‌ಗೆ ಪ್ರಯಾಣಿಸುತ್ತಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ.