ಹೆಚ್ಚುವರಿ ರಾಗಿ ಖರೀದಿಗೆ ಕೇಂದ್ರ ಒಪ್ಪಿಗೆ, ಬಿಜೆಪಿ ಜಿಲ್ಲಾಧ್ಯಕ್ಷ ಸ್ವಾಗತ

ಹೊಸದಿಗಂತ ವರದಿ ಮಂಡ್ಯ:

ರಾಗಿ ಬೆಳೆಗಾರರ ಹಿತ ಕಾಯುವ ದೃಷ್ಠಿಯಿಂದ ಕೇಂದ್ರ ಸರ್ಕಾರ ಹೆಚ್ಚುವರಿ ರಾಗಿ ಖರೀದಿಗೆ ಒಪ್ಪಿಗೆ ನೀಡಿರುವುದನ್ನು ಜಿಲ್ಲಾ ಬಿಜೆಪಿ ಅಧ್ಯಕ್ಷ ಕೆ.ಜೆ. ವಿಜಯಕುಮಾರ್ ಸ್ವಾಗತಿಸಿದ್ದಾರೆ. ಮಂಡ್ಯ, ಮೈಸೂರು, ಹಾಸನ, ಚಾಮರಾಜನಗರ ಸೇರಿದಂತೆ ದಕ್ಷಿಣ ಕರ್ನಾಟಕ ಪ್ರಾಂತ್ಯದಲ್ಲಿ ಹೆಚ್ಚುವರಿಯಾಗಿ ಬೆಳೆಯುವ ರಾಗಿ ಬೆಳೆಗಾರರನ್ನು ರಕ್ಷಣೆ ಮಾಡುವ ಉದ್ದೇಶದಿಂದ ಬೆಂಬಲ ಬೆಲೆ ನೀಡಿ ಮೂರು ಲಕ್ಷ ಮೆಟ್ರಿಕ್ ಟನ್ ರಾಗಿ ಖರೀದಿ ಮಾಡಲು ಕೇಂದ್ರ ಸರ್ಕಾರ ಮುಂದಾಗಿದೆ ಎಂದು ವಿಜಯಕುಮಾರ್ ಪತ್ರಿಕಾಹೇಳಿಕೆಯಲ್ಲಿ ತಿಳಿಸಿದ್ದಾರೆ.

ರಾಜ್ಯದ ಐದಾರು ಜಿಲ್ಲೆಗಳಲ್ಲಿ ರಾಗಿ ಬೆಳೆದ ರೈತರಿಗೆ ಬೆಲೆ ಸಿಗಬೇಕೆಂಬ ಕಾರಣದಿಂದ ಮೊದಲು 2 ಲಕ್ಷ ಮೆಟ್ರಿಕ್ ಟನ್ ರಾಗಿ ಖರೀದಿ ಮಾಡಲಾಯಿತು. ರಾಗಿ ಬೆಳೆಗಾರರಿಂದ ಬೇಡಿಕೆ ಬಂದ ಹಿನ್ನೆಲೆಯಲ್ಲಿ 485 ಕೋಟಿ ರೂ.ಗಳನ್ನು ಮಂಜೂರು ಮಾಡಿ 1.14 ಲಕ್ಷ ಮೆಟ್ರಿಕ್ ಟನ್ ಖರೀದಿ ಮಾಡಲಾಯಿತು ಎಂದು ತಿಳಿಸಿದ್ದಾರೆ.

ಈ ಬಾರಿ ರಾಗಿ ಹೆಚ್ರಾಚಾಗಿ ಬೆಳೆದಿದ್ದು, ಮತ್ತಷ್ಟು ರಾಗಿ ಖರೀದಿ ಮಾಡುವ ರೈತರ ಒತ್ತಾಸೆಯ ಮೇರೆಗೆ ಈ ಕುರಿತು,  ಕೇಂದ್ರ ಸಚಿವರಿಗೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಕೇಂದ್ರ ಸರ್ಕಾರ ಒಪ್ಪಿಗೆ ನೀಡಿರುವುದರಿಂದ ರಾಗಿ ಖರೀದಿಯನ್ನು ಪ್ರಾರಂಭಿಸಲಾಗುವುದು. ಇದಕ್ಕಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಹಾಗೂ ಕೇಂದ್ರ ಆಹಾರ ಸಚಿವ ಪಿಯೂಶ್ ಗೋಯಲ್ ಅವರಿಗೆ ಧನ್ಯವಾದಗಳು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!