ಕೋಚಿಂಗ್ ಸೆಂಟರ್ ಗಳ ನಿಯಂತ್ರಣಕ್ಕೆ ‘ಮಾರ್ಗಸೂಚಿ’ ಹೊರಡಿಸಿದ ಕೇಂದ್ರ ಸರ್ಕಾರ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ದೇಶದ ಕೋಚಿಂಗ್ ಸೆಂಟರ್‌ಗಳ ನಿಯಂತ್ರಿಸಲು ಕೇಂದ್ರ ಸರ್ಕಾರ ಮಾರ್ಗಸೂಚಿಗಳನ್ನು ಹೊರಡಿಸಿದೆ. ಇದರ ಪ್ರಕಾರ ಈಗ ವೃತ್ತಿಪರ ಕೋರ್ಸ್‌ಗಳಿಗೆ ಕೋಚಿಂಗ್ ನೀಡುವ ಕೇಂದ್ರಗಳು ನೋಂದಣಿ ಮಾಡುವುದನ್ನು ಕಡ್ಡಾಯಗೊಳಿಸಲಾಗಿದೆ. ಯಾವುದೇ ಕೋಚಿಂಗ್ ಸೆಂಟರ್‌  ಗಳು ಈಗ 16 ವರ್ಷಕ್ಕಿಂತ ಕಡಿಮೆ ವಯಸ್ಸಿನ ವಿದ್ಯಾರ್ಥಿಗಳನ್ನು ದಾಖಲಿಸುವಂತಿಲ್ಲ.

ವಿದ್ಯಾರ್ಥಿಗಳಿಂದ ಹೆಚ್ಚಿನ ಶುಲ್ಕ ವಸೂಲಿ ಮಾಡುವಂತಿಲ್ಲ. ಹೊಸ ನಿಯಮಗಳ ಪ್ರಕಾರ, ಕೋಚಿಂಗ್ ಸೆಂಟರ್‌’ಗಳು ಅಗ್ನಿಶಾಮಕ ಸುರಕ್ಷತೆ ಮತ್ತು ಕಟ್ಟಡ ಭದ್ರತೆಯ ನಿಯತಾಂಕಗಳನ್ನು ಪೂರೈಸಬೇಕು. ಇದಲ್ಲದೆ, ವಿದ್ಯಾರ್ಥಿಗಳಿಗೆ ಮಾನಸಿಕ ಆರೋಗ್ಯ ಬೆಂಬಲ
ಸಹ ಒದಗಿಸಬೇಕಾಗುತ್ತದೆ.

ಕೋಚಿಂಗ್ ಸೆಂಟರ್’ಗಳು ಹೆಚ್ಚಿನ ಶುಲ್ಕ ವಸೂಲಿ ಮಾಡುವುದರಿಂದ ವಿದ್ಯಾರ್ಥಿಗಳಲ್ಲಿ ಒತ್ತಡ ಉಂಟಾಗುತ್ತಿದ್ದು, ಇದರಿಂದ ಹಲವು ಆತ್ಮಹತ್ಯೆ ಪ್ರಕರಣಗಳು ಬೆಳಕಿಗೆ ಬಂದಿರುವುದರಿಂದ ಕೇಂದ್ರ ಸರ್ಕಾರ ಈ ಕ್ರಮಕ್ಕೆ ಮುಂದಾಗಿದೆ. 2024 ರ ಕೋಚಿಂಗ್ ಸೆಂಟರ್‌’ಗಳ ನೋಂದಣಿ ಮತ್ತು ನಿಯಂತ್ರಣಕ್ಕಾಗಿ ಸಿದ್ಧಪಡಿಸಲಾದ ಮಾರ್ಗಸೂಚಿಗಳನ್ನು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಕಾರ್ಯದರ್ಶಿಗಳಿಗೆ ಕಳುಹಿಸಲಾಗಿದೆ. ಕೆಲವು ರಾಜ್ಯಗಳಲ್ಲಿ, ಕೋಚಿಂಗ್ ಸಂಸ್ಥೆಗಳಿಗೆ ಸಂಬಂಧಿಸಿದಂತೆ ನಿಯಂತ್ರಿತ ಕಾನೂನುಗಳು ಈಗಾಗಲೇ ಜಾರಿಯಲ್ಲಿವೆ.

ಹೊಸ ಮಾರ್ಗಸೂಚಿಗಳು
ವಿದ್ಯಾರ್ಥಿಗಳ ಮೇಲಿನ ಹೆಚ್ಚಿನ ಸ್ಪರ್ಧೆ ಮತ್ತು ಶೈಕ್ಷಣಿಕ ಒತ್ತಡ ಕಡಿಮೆ ಮಾಡಲು ಕೋಚಿಂಗ್ ಸೆಂಟರ್‌’ಗಳು ವಿದ್ಯಾರ್ಥಿಗಳ ಮಾನಸಿಕ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು ಎಂದು ಕೇಂದ್ರ ಹೊರಡಿಸಿದ ಮಾರ್ಗಸೂಚಿಗಳು ಹೇಳುತ್ತವೆ. ಬಿಕ್ಕಟ್ಟಿನ ಸಂದರ್ಭದಲ್ಲಿ, ವಿದ್ಯಾರ್ಥಿಗಳಿಗೆ ತಕ್ಷಣವೇ ಸಹಾಯ ಮಾಡಬೇಕು. ಕೋಚಿಂಗ್ ಸೆಂಟರ್‌’ಗಳು ವಿದ್ಯಾರ್ಥಿಗಳ ಮಾನಸಿಕ ಒತ್ತಡವನ್ನ ಹೋಗಲಾಡಿಸಲು ಕ್ರಮಗಳನ್ನ ಕೈಗೊಳ್ಳುವ ವ್ಯವಸ್ಥೆಯನ್ನ ಸಿದ್ಧಪಡಿಸಬೇಕು. ಅಂತಿಮವಾಗಿ ಮಾನಸಿಕ ಒತ್ತಡ ಮತ್ತು ಖಿನ್ನತೆ ಹೋಗಲಾಡಿಸಲು ಕೋಚಿಂಗ್ ಸಂಸ್ಥೆಗಳು ಕೌನ್ಸೆಲಿಂಗ್‌’ಗೆ ವ್ಯವಸ್ಥೆ ಮಾಡಬೇಕಾಗುತ್ತದೆ ಎಂದು ಹೇಳಲಾಗಿದೆ.

ಈ ವಿಚಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು.!
ಕಳೆದ ವರ್ಷ ನವೆಂಬರ್‌’ನಲ್ಲಿ ಈ ವಿಚಾರ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿತ್ತು. ಸಂತ್ರಸ್ತೆಯ ಪೋಷಕರು ಅನಿರುದ್ಧ್ ನಾರಾಯಣ್ ಮಲ್ಪಾನಿ ​​ಅವರು ಕೋಟಾ ರಾಜಸ್ಥಾನದಲ್ಲಿ ವಿದ್ಯಾರ್ಥಿಗಳ ಆತ್ಮಹತ್ಯೆಗೆ ಸಂಬಂಧಿಸಿದಂತೆ ಕಾನೂನಿಗೆ ಒತ್ತಾಯಿಸಿ ಸುಪ್ರೀಂ ಕೋರ್ಟ್‌ನ ಮೊರೆ ಹೋಗಿದ್ದರು. ಕೋಟಾದಲ್ಲಿ 2023ರಲ್ಲಿ 26 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!