ಹೊಸದಿಗಂತ ಡಿಜಿಟಲ್ ಡೆಸ್ಕ್:
ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಕೇಂದ್ರೀಯ ಸಂಸ್ಥೆಗಳನ್ನು ದುರುಪಯೋಗ ಮಾಡಿಕೊಳ್ಳುತ್ತಿದ್ದು, ದ್ವೇಷ ರಾಜಕೀಯ ಮಾಡುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದ್ದು, ಇದನ್ನು ಖಂಡಿಸಿ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿರುವ ಜಾರಿ ನಿರ್ದೇಶನಾಲಯ ಕಚೇರಿಯ ಎದುರು ಬುಧವಾರ ಪ್ರತಿಭಟನೆ ನಡೆಸುವುದಾಗಿ ತಿಳಿಸಿದೆ.
ನ್ಯಾಷನಲ್ ಹೆರಾಲ್ಡ್‌ನ ಆಸ್ತಿಗಳನ್ನು ಅನಿಯಂತ್ರಿತ ಮತ್ತು ಅನ್ಯಾಯವಾಗಿ ಮುಟ್ಟುಗೋಲು ಹಾಕಿಕೊಳ್ಳಲಾಗುತ್ತಿದ್ದು, ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರ ವಿರುದ್ಧ ರಾಜಕೀಯ ಪ್ರೇರಿತ ಆರೋಪಪಟ್ಟಿಗಳನ್ನು ಸಲ್ಲಿಸಲಾಗಿದೆ ಎಂದು ಆರೋಪಿಸಿದೆ.
ಇದನ್ನು ಇಡಿ ಕಚೇರಿಗಳ ಎದುರು ಪ್ರತಿಭಟನೆ ನಡೆಸಲಾಗುತ್ತಿದ್ದು, ಪಕ್ಷದ ಶಾಸಕರು, ಸಂಸದರು ಮತ್ತು ಪಕ್ಷದ ನಾಯಕರು ಪಾಲ್ಗೊಳ್ಳಲಿದ್ದಾರೆಂದು ತಿಳಿಸಿದೆ. ಆದರೆ, ಕಲಬುರಗಿಯಲ್ಲಿ ಈ ಮೊದಲೇ ನಿಗದಿಪಡಿಸಿರುವ ಕಾರ್ಯಕ್ರಮಗಳ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪ್ರತಿಭಟನೆಯಲ್ಲಿ ಭಾಗವಹಿಸುವುದಿಲ್ಲ ಎಂದು ತಿಳಿದುಬಂದಿದೆ.