ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಂಗಳೂರು-ಬೆಂಗಳೂರು ನಡುವೆ ಸಂಪರ್ಕ ಕಲ್ಪಿಸುವ ಶಿರಾಡಿಘಾಟ್‌ನಲ್ಲಿ ಸುರಂಗ, ಗ್ರೀನ್ ಫೀಲ್ಡ್ ಮಾರ್ಗ ನಿರ್ಮಾಣಕ್ಕೆ DPR ತಯಾರಿಸಲು ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ.
ಕೇಂದ್ರ ಸಚಿವ ನಿತಿನ್ ಗಡ್ಕರಿ ಸುರಂಗ ಮಾರ್ಗ ಕಾರ್ಯಸಾಧುವಲ್ಲ, ಇದಕ್ಕೆ ಭಾರೀ ಮೊತ್ತ ಬೇಕಾಗುತ್ತದೆ ಎಂದು ತಿರಸ್ಕರಿಸಿದ್ದರು.
ಆದರೆ, ಸುರಂಗ ನಿರ್ಮಾಣಕ್ಕೆ ಒಪ್ಪಿಗೆ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರವು ಕೇಂದ್ರದ ಮೇಲೆ ಒತ್ತಡ ತಂದ ಹಿನ್ನೆಲೆಯಲ್ಲಿ ಡಿಪಿಆರ್ ತಯಾರಿಸಲು ಒಪ್ಪಿಗೆ ಸಿಕ್ಕಿದೆ. ಆದರೆ ಇದಕ್ಕೆ ಪರಿಸರವಾದಿಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.