ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………………………….
ಹೊಸದಿಗಂತ ಆನ್ ಲೈನ್ ಡೆಸ್ಕ್:
ಕೇಂದ್ರ ಸಚಿವ ಥಾವರ್ ಚಂದ್ ಗೆಹ್ಲೋಟ್ ಅವರ ಪುತ್ರಿ ಯೋಗಿತಾ ಸೋಲಂಕಿ (42) ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ.
ಕಳೆದ ಒಂದು ವಾರದಿಂದ ಇಂದೋರ್ ನ ಮೆಡಂತಾ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಕೊನೆಯುಸಿರೆಳೆದಿದ್ದಾರೆ. ಇವರಿಗೆ ಶ್ವಾಸಕೋಶ ಶೇ.80ರಷ್ಟು ಹಾನಿಯಾಗಿದ್ದು, ಸೋಮವಾರ ಸಂಜೆ ಮೃತಪಟ್ಟಿದ್ದಾರೆ ಎಂದು ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಸಂದೀಪ್ ಶ್ರೀವಾಸ್ತವ ಹೇಳಿದ್ದಾರೆ.
ಯೋಗಿತಾ ಅವರು ಗೃಹಿಣಿಯಾಗಿದ್ದು, ಪತಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.