ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
……………………………………………………………………
ಹೊಸದಿಗಂತ ಆನ್ ಲೈನ್ ಡೆಸ್ಕ್:
ದೇಶದಲ್ಲಿ ಕೊರೋನಾ ಲಸಿಕೆಯ ಕೊರತೆಯ ಕೂಗು ಕೇಳುತ್ತಿರುವಾಗ ಈ ವದಂತಿಯನ್ನು ಕೇಂದ್ರ ಆರೋಗ್ಯ ಸಚಿವಾಲಯ ತಳ್ಳಿ ಹಾಕಿದ್ದು, ಎಲ್ಲ ರಾಜ್ಯಗಳು ಮತ್ತು ಕೇಂದ್ರ ಪ್ರದೇಶಗಳಲ್ಲಿ ಇನ್ನೂ 89,31,505 ಡೋಸ್ ಕೋವಿಡ್ -19 ಲಸಿಕೆ ಲಭ್ಯವಿದೆ ಎಂದು ಗುರುವಾರ ಹೇಳಿದೆ.
ಮುಂದಿನ ಮೂರು ದಿನಗಳಲ್ಲಿ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ 28 ಲಕ್ಷಕ್ಕೂ ಹೆಚ್ಚಿನ ಡೋಸ್ ಲಸಿಕೆ ಪೂರೈಸಲಾಗುವುದು ಎಂದು ಸಹ ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ಕೇಂದ್ರವು ರಾಜ್ಯಗಳಿಗೆ ಈವರೆಗೆ 17,15,42,410 ಉಚಿತ ಲಸಿಕೆಗಳನ್ನು ನೀಡಿದೆ. ಇದರಲ್ಲಿ, ಲಸಿಕೆ ವ್ಯರ್ಥವಾಗಿರುವುದನ್ನು ಹೊರತುಪಡಿಸಿ, ಒಟ್ಟು 16,26,10,905 ಡೋಸ್ ಬಳಕೆಯಾಗಿವೆ. ದೇಶದಲ್ಲಿ ಇಲ್ಲಿಯವರೆಗೆ 16,24,30,828 ಡೋಸ್ ಲಸಿಕೆ ನೀಡಲಾಗಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.
ಕೊರೋನಾವಿರುದ್ಧ ರಾಜ್ಯಗಳು ಮತ್ತು ಕೇಂದ್ರ ಪ್ರದೇಶಗಳ ಸಹಯೋಗದೊಂದಿಗೆ ಕೇಂದ್ರ ಸರ್ಕಾರವು ‘ಸಂಪೂರ್ಣ ಸರ್ಕಾರ’ ವಿಧಾನದ ಮೂಲಕ ಮುನ್ನಡೆಸುತ್ತಿದೆ ಎಂದು ಸಚಿವಾಲಯ ತಿಳಿಸಿದೆ.