ಹೊಸದಿಗಂತ ಡಿಜಿಟಲ್ ಡೆಸ್ಕ್:
ತಿರುವನಂತರಪುರ-ಕಾಸರಗೋಡು ನಡುವೆ ಸಂಚರಿಸುತ್ತಿದ್ದ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲನ್ನು ಮಂಗಳೂರಿನವರೆಗೆ ವಿಸ್ತರಣೆ ಮಾಡುವಂತೆ ದಕ್ಷಿಣ ಕನ್ನಡ ಜಿಲ್ಲೆಯ ಸಂಸದ ನಳಿನ್ ಕುಮಾರ್ ಕಟೀಲ್ ಅವರ ಮನವಿಗೆ ಕೇಂದ್ರ ರೈಲ್ವೆ ಇಲಾಖೆ ಸ್ಪಂದಿಸಿದೆ.
ಇದೀಗ ತಿರುವನಂತರಪುರ-ಕಾಸರಗೋಡು ನಡುವೆ ಸಂಚರಿಸುತ್ತಿದ್ದ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಮಂಗಳೂರಿನವರೆಗೆ ವಿಸ್ತರಣೆ ಮಾಡಲು ಕೇಂದ್ರ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್ ಅವರು ಸಮ್ಮತಿ ಸೂಚಿಸಿದ್ದಾರೆ.
ಈ ಕುರಿತು ಖುಷಿ ಹಂಚಿಕೊಂಡಿರುವ ದ.ಕ. ಸಂಸದ ನಳಿನ್ ಕುಮಾರ್ ಕಟೀಲ್ , ನಮ್ಮ ಮನವಿಯನ್ನು ಪುರಸ್ಕರಿಸಿ ವಂದೇ ಭಾರತ್ ರೈಲನ್ನು ಮಂಗಳೂರಿನವರೆಗೆ ವಿಸ್ತರಿಸಿದ ಕೇಂದ್ರ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್ ಅವರಿಗೆ ಧನ್ಯವಾದಗಳು. ಈ ರೈಲು ಮಂಗಳೂರಿನಿಂದ ಬೆಳಿಗ್ಗೆ 06.15ಕ್ಕೆ ಹೊರಟು ಮಧ್ಯಾಹ್ನ 3.05ಕ್ಕೆ ತಿರುವನಂತಪುರವನ್ನು ತಲುಪಲಿದೆ. ಹಾಗೆಯೇ ತಿರುವನಂತಪುರದಿಂದ ಸಂಜೆ 4.05ಕ್ಕೆ ಹೊರಟು ಮಂಗಳೂರಿಗೆ ರಾತ್ರಿ 12.40ಕ್ಕೆ ತಲುಪಲಿದೆ. ಬುಧವಾರ ಹೊರತು ಪಡಿಸಿ ವಾರದ ಆರು ದಿನಗಳ ಕಾಲ ಈ ವಂದೇ ಭಾರತ್ ರೈಲು ಸಂಚರಿಸುವುದರಿಂದ ಈ ಭಾಗದಲ್ಲಿ ಓಡಾಡುವ ಹಲವು ಪ್ರಯಾಣಿಕರಿಗೆ ಅನುಕೂಲವಾಗಲಿದೆ ಎಂದು ಮಾಹಿತಿ ನೀಡಿದ್ದಾರೆ.
ತಿರುವನಂತರಪುರ-ಕಾಸರಗೋಡು ನಡುವೆ ಸಂಚರಿಸುತ್ತಿದ್ದ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಈಗ ಮಂಗಳೂರಿನವರೆಗೆ ವಿಸ್ತರಣೆ.
ನಮ್ಮ ಮನವಿಯನ್ನು ಪುರಸ್ಕರಿಸಿ ವಂದೇ ಭಾರತ್ ರೈಲನ್ನು ಮಂಗಳೂರಿನವರೆಗೆ ವಿಸ್ತರಿಸಿದ ಕೇಂದ್ರ ರೈಲ್ವೆ ಸಚಿವರಾದ ಶ್ರೀ @AshwiniVaishnaw ಅವರಿಗೆ ಧನ್ಯವಾದಗಳು.
ಈ ರೈಲು ಮಂಗಳೂರಿನಿಂದ ಬೆಳಿಗ್ಗೆ 06.15ಕ್ಕೆ ಹೊರಟು…
— Nalinkumar Kateel (@nalinkateel) February 21, 2024