ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಈ ಬಾರಿ ಮಳೆಯಿಲ್ಲದೇ ರೈತ ಕಂಗಾಲಾಗಿದ್ದಾನೆ. ಮುಂಗಾರಿಲ್ಲದೇ ಬರಗಾಲ ಪರಿಸ್ಥಿತಿ ಎದುರಾಗಿದ್ದು, ಬರ ಸಮೀಕ್ಷೆ ನಡೆಸಲು ಕೇಂದ್ರದ ತಂಡ ನಾಳೆ ಕರ್ನಾಟಕಕ್ಕೆ ಆಗಮಿಸಲಿದೆ.
ಮೂರು ತಂಡ ಆಗಮಿಸಲಿದ್ದು, ಅಕ್ಟೋಬರ್ 9 ರವರೆಗೆ ಸಮೀಕ್ಷೆ ಹಾಗೂ ಅಧ್ಯಯನ ಮಾಡಲಿದ್ದಾರೆ. ಒಟ್ಟಾರೆ 12 ಜಿಲ್ಲೆಗಳಿಗೆ ಭೇಟಿ ನೀಡಲಿದ್ದು, ಭೇಟಿಗೂ ಮುನ್ನ ಸಿಎಂ ಸಿದ್ದರಾಮಯ್ಯ ಅವರ ಜತೆ ಸಭೆ ನಡೆಸಲಿದ್ದಾರೆ.
ಬೆಳಗಾವಿ, ವಿಜಯಪುರ, ಬಾಗಲಕೋಟೆ, ಧಾರವಾಡ, ಚಿತ್ರದುರ್ಗ, ಹಾವೇರಿ, ಗದಗ, ಕೊಪ್ಪಳ, ವಿಜಯನಗರ, ಚಿಕ್ಕಬಳ್ಳಾಪುರ, ತುಮಕೂರು, ದಾವಣಗೆರೆ ಈ ಜಿಲ್ಲೆಗಳಿಗೆ ಕೇಂದ್ರದ ತಂಡ ಭೇಟಿ ನೀಡಲಿದೆ. ಸರ್ಕಾರ ಈಗಾಗಲೇ 195 ತಾಲೂಕುಗಳನ್ನು ಬರಪೀಡಿತ ಎಂದು ಘೋಷಣೆ ಮಾಡಿದೆ. ಇದಕ್ಕಾಗಿ ಆರು ಸಾವಿರ ಕೋಟಿ ರೂಪಾಯಿ ಪರಿಹಾರವನ್ನು ಕೇಳಿದೆ. ಈ ಹಿನ್ನೆಲೆಯಲ್ಲಿ ಸಮೀಕ್ಷೆ ನಡೆಯಲಿದೆ.