ಹೊಸದಿಗಂತ ಡಿಜಿಟಲ್ ಡೆಸ್ಕ್:
ನವೀಕರಿಸಬಹುದಾದ ಇಂಧನ ವಲಯದಲ್ಲಿ ಸಂಶೋಧನಾ ಅಭಿವೃದ್ಧಿ ಮತ್ತು ನಾವೀನ್ಯತೆಗಾಗಿ 1.27 ಲಕ್ಷ ಕೋಟಿ ಬಜೆಟ್‌ನ ಯೋಜನೆಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.
ಮುಂಬೈನ ಐಐಟಿಯಲ್ಲಿರುವ ರಾಷ್ಟ್ರೀಯ ಫೋಟೊವೋಲ್ಟಾಯಿಕ್ ಸಂಶೋಧನೆ ಮತ್ತು ಶಿಕ್ಷಣ ಕೇಂದ್ರಕ್ಕೆ ಬುಧವಾರ ಭೇಟಿ ನೀಡಿದ ಅವರು ಸಲಹಾ ಮಂಡಳಿ ಸದಸ್ಯರೊಂದಿಗೆ ಸಭೆ ನಡೆಸಿ, ಈ ಬಗ್ಗೆ ಮಾಹಿತಿ ನೀಡಿದರು.
ಕೇಂದ್ರ ಸಚಿವ ಸಂಪುಟ ಎರಡು ವಾರಗಳ ಹಿಂದೆಯಷ್ಟೇ ಸಂಶೋಧನಾ ಅಭಿವೃದ್ಧಿ ಮತ್ತು ನಾವೀನ್ಯತೆ ಯೋಜನೆಯನ್ನು ಅನುಮೋದಿಸಿದೆ. ಭಾರತ ಶುದ್ಧ ಇಂಧನಕ್ಕಾಗಿ ಅತ್ಯಾಧುನಿಕ ತಂತ್ರಜ್ಞಾನಗಳನ್ನು ಅಳವಡಿಸಲು ಬದ್ಧವಾಗಿದೆ ಎಂದು ತಿಳಿಸಿದ್ದಾರೆ.