ಹೊಸದಿಗಂತ ಡಿಜಿಟಲ್ ಡೆಸ್ಕ್:
ನ್ಯಾಯಮೂರ್ತಿಗಳಾದ ಉಜ್ಜಲ್ ಭುಯಾನ್ ಮತ್ತು ಎಸ್ವಿ ಭಟ್ಟಿ ಅವರನ್ನು ಸುಪ್ರೀಂ ಕೋರ್ಟ್ನ ನ್ಯಾಯಮೂರ್ತಿಗಳಾಗಿ ನೇಮಕ ಮಾಡಲು ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದೆ.
ತೆಲಂಗಾಣ ಹೈಕೋರ್ಟ್ನ ಮುಖ್ಯನ್ಯಾಯಮೂರ್ತಿ ಉಜ್ಜಲ್ ಭುಯಾನ್ ಮತ್ತು ಕೇರಳ ಹೈಕೋರ್ಟ್ನ ಮುಖ್ಯನ್ಯಾಯಮೂರ್ತಿ ವೆಂಕಟನಾರಾಯಣ ಭಟ್ಟಿ ಅವರನ್ನು ಸುಪ್ರೀಂ ಕೋರ್ಟ್ನ ನ್ಯಾಯಮೂರ್ತಿಗಳನ್ನಾಗಿ ಕೇಂದ್ರ ಸರ್ಕಾರ ನೇಮಿಸಿದೆ.
ಜುಲೈ 5ರಂದು ಕೊಲಿಜಿಯಂ ಮಾಡಿದ್ದ ಶಿಫಾರಸ್ಸಿನ ಆಧಾರದ ಮೇಲೆ ಕೇಂದ್ರ ಸರ್ಕಾರ ಈ ಇಬ್ಬರು ನ್ಯಾಯಾಧೀಶರ ನೇಮಕವನ್ನು ಅಂತಿಮಗೊಳಿಸಿದೆ. ಈ ಇಬ್ಬರ ನೇಮಕದೊಂದಿಗೆ, ಸುಪ್ರೀಂ ಕೋರ್ಟ್ನ ನ್ಯಾಯಮೂರ್ತಿಗಳ ಸಂಖ್ಯೆ 33ಕ್ಕೆ ಏರಿಕೆಯಾಗಿದೆ.