ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಜನಪರ ಕಾಳಜಿ ಅಭಿವೃದ್ಧಿ ಕಾರ್ಯಕ್ರಮ, ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರ ಕಾರ್ಯ ವೈಖರಿ, ಜನಪರ ಕಾಳಜಿಯನ್ನು ಮೆಚ್ಚಿ ಎಸ್.ಡಿ.ಪಿ.ಐ (ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ) ಬೆಂಬಲಿತ ಕಾಪು ಪುರಸಭಾ ಸದಸ್ಯೆ ಸರಿತಾ ಹಾಗೂ ಅವರ ಪತಿ ಶಿವಾನಂದ್ ಇಂದು (ಆ. 28) ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.
ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಹಾಗೂ ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ, ಪಕ್ಷದ ಬಾವುಟ ನೀಡಿ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು.
ಈ ಸಂದರ್ಭ ಜೆಡಿಎಸ್ ಉಡುಪಿ ಜಿಲ್ಲಾಧ್ಯಕ್ಷ ಯೋಗೀಶ್ ಶೆಟ್ಟಿ ಬಾಲಾಜಿ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಮಾಜಿ ಶಾಸಕ ಲಾಲಾಜಿ ಆರ್ ಮೆಂಡನ್, ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಶ್ರೀಕಾಂತ್ ನಾಯಕ್, ಕೋಶಾಧಿಕಾರಿ ಮನೋಹರ್ ಕಲ್ಮಾಡಿ, ಕಾಪು ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಗೋಪಾಲಕೃಷ್ಣ ರಾವ್, ಶರಣ್ ಕುಮಾರ್ ಮಟ್ಟು, ಜಿಲ್ಲಾ ಬಿಜೆಪಿ ನಿಕಟಪೂರ್ವ ಪ್ರಧಾನ ಕಾರ್ಯದರ್ಶಿ ಕುತ್ಯಾರು ನವೀನ್ ಶೆಟ್ಟಿ, ಕಾಪು ಪುರಸಭೆಯ ಸದಸ್ಯರು, ಪಕ್ಷದ ಹಿರಿಯರು, ಪ್ರಮುಖರು, ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.