ಏನಾದರೂ ಮಾಡಿ ಜಮ್ಮು ಕಾಶ್ಮೀರದ ಪರಿಸ್ಥಿತಿಯನ್ನು ಸುಧಾರಿಸಿ:ಕೇಂದ್ರಕ್ಕೆ ಒಮರ್ ಅಬ್ದುಲ್ಲಾ ಮನವಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಜಮ್ಮು ಮತ್ತು ಕಾಶ್ಮೀರದಲ್ಲಿ ಕಾಶ್ಮೀರಿ ಪಂಡಿತರ ಹತ್ಯೆ, ಸ್ಥಳಾಂತರ, ಚುನಾವಣೆ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಕಳವಳ ವ್ಯಕ್ತಪಡಿಸಿದ್ದಾರೆ. ಜಮ್ಮು ಮತ್ತು ಕಾಶ್ಮೀರದಲ್ಲಿನ ಪರಿಸ್ಥಿತಿಯನ್ನು ಸುಧಾರಿಸಲು ಕೇಂದ್ರ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಿ ಎಂದು ಅಬ್ದುಲ್ಲಾ ಒತ್ತಾಯಿಸಿದ್ದಾರೆ. ಜಮ್ಮು ಮತ್ತು ಕಾಶ್ಮೀರದಲ್ಲಿ ವಿಧಾನಸಭೆ ಚುನಾವಣೆ ನಡೆಸುವ ವಿಚಾರದಲ್ಲಿ ಚುನಾವಣಾ ಆಯೋಗ ಸಹ ಇದುವರೆಗೂ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದರು.

ಕಾಶ್ಮೀರದಲ್ಲಿ ಪರಿಸ್ಥಿತಿ ಹೇಗಿದೆ ಎಂಬುದು ಎಲ್ಲರಿಗೂ ಗೊತ್ತಿದೆ. ಅನಪೇಕ್ಷಿತ ಘಟನೆಗಳು ನಡೆಯದೆ ದಿನವೇ ಇಲ್ಲ, ಜನರು ಪ್ರತಿದಿನ ಭಯ ಹಾಗೂ ಶೋಕ ವಾತಾವರಣದಲ್ಲಿ ಮುಳುಗಿದ್ದಾರೆ. ಇಂತಹ ಕೆಟ್ಟ ಪರಿಸ್ಥಿತಿಯನ್ನು ನಿರ್ಮೂಲನೆ ಮಾಡಲು ಸರ್ಕಾರ ಈ ಬಗ್ಗೆ ಏನಾದರೂ ಮಾಡಬೇಕು ಎಂದು ಒಮರ್ ಅಬ್ದುಲ್ಲಾ ಮನವಿ ಮಾಡಿದ್ದಾರೆ. ಜಮ್ಮು-ಕಾಶ್ಮೀರ ವಿಧಾನಸಭೆ ಚುನಾವಣೆ ವಿಚಾರವಾಗಿ ಮಾತನಾಡಿದ ಅವರು, ಚುನಾವಣೆ ನಡೆಸುವ ವಿಚಾರದಲ್ಲಿ ಚುನಾವಣಾ ಆಯೋಗದ್ದೇ ಅಂತಿಮ ನಿರ್ಧಾರ ಆ ಜವಾಬ್ದಾರಿ ಚುನಾವಣಾ ಆಯೋಗದ ಮೇಲಿದೆ. ಆದರೆ, ಇದುವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಒಮರ್ ಅಬ್ದುಲ್ಲಾ ಆರೋಪಿಸಿದ್ದಾರೆ.

ಈ ನಡುವೆ ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕರ ಸರಣಿ ದಾಳಿಗಳು ಭಯದ ವಾತಾವರಣವನ್ನು ನಿರ್ಮಿಸಿವೆ. ಅದರಲ್ಲೂ ಮುಖ್ಯವಾಗಿ ಕಾಶ್ಮೀರ ಪಂಡಿತರನ್ನು ಭಯೋತ್ಪಾದಕರು ಟಾರ್ಗೆಟ್ ಮಾಡಿದ್ದು, ದಾಳಿಗೆ ಭಯಭೀತರಾದ ಕಾಶ್ಮೀರ ಪಂಡಿತರು ಬೇರೆಡೆಗೆ ತೆರಳುತ್ತಿದ್ದಾರೆ ಎಂದು ತಮ್ಮ ಮನಸಿನ ದುಗುಡವನ್ನು ಹೊರಹಾಕಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!