ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಪಿ.ಬಿ. ವರಾಳೆನೇಮಕ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ಬಾಂಬೆ ಹೈಕೋರ್ಟ್‌ನ ನ್ಯಾಯಮೂರ್ತಿ ಪ್ರಸನ್ನ ಬಿ. ವರಾಳೆ ಅವರನ್ನು ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕಗೊಳಿಸಿ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದೆ.
ಭಾರತದ ಮುಖ್ಯ ನ್ಯಾಯಮೂರ್ತಿ ಯು.ಯು.ಲಲಿತ್ ನೇತೃತ್ವದ ಸುಪ್ರೀಂ ಕೋರ್ಟ್ ಕೊಲಿಜಿಯಂ ತನ್ನ ಸೆಪ್ಟೆಂಬರ್ 30 ರ ಸಭೆಯಲ್ಲಿ ನ್ಯಾಯಮೂರ್ತಿ ವರಾಳೆ ಅವರ ಪದೊನ್ನತಿಗೆ ಶಿಫಾರಸು ಮಾಡಿತ್ತು.
ಮಂಗಳವಾರ ಬೆಳಿಗ್ಗೆ ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಅವರು ಟ್ವಿಟ್‌ ಮಾಡಿ, ಸಂವಿಧಾನದ ನಿಬಂಧನೆಗಳ ಪ್ರಕಾರ ನ್ಯಾಯಮೂರ್ತಿ ವರಾಳೆ ಅವರನ್ನು ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನೇಮಿಸಲಾಗಿದೆ ಎಂದು ಟ್ವೀಟ್ ಮಾಡಿದ್ದಾರೆ. ಈ ವರ್ಷದ ಆರಂಭದಲ್ಲಿ ಬಾಂಬೆ ಹೈಕೋರ್ಟ್‌ನ ಇತರ ಮೂವರು ಹಿರಿಯ ನ್ಯಾಯಾಧೀಶರನ್ನು ಇತರ ಹೈಕೋರ್ಟ್‌ಗಳ ಮುಖ್ಯ ನ್ಯಾಯಮೂರ್ತಿಗಳಾಗಿ ನೇಮಿಸಲು ಶಿಫಾರಸು ಮಾಡಲಾಗಿತ್ತು.

ಜೂನ್ 23, 1962 ರಂದು ನಿಪಾನಿಯಲ್ಲಿ ಜನಿಸಿದ ಜಸ್ಟಿಸ್ ವರಾಳೆ ಅವರು ಡಾ ಬಾಬಾಸಾಹೇಬ್ ಅಂಬೇಡ್ಕರ್ ಮರಾಠಾ ವಿಶ್ವವಿದ್ಯಾಲಯದಿಂದ ಕಲೆ ಮತ್ತು ಕಾನೂನು ಶಾಸ್ತ್ರದಲ್ಲಿ ಪದವಿ ಪಡೆದಿದ್ದಾರೆ. ಆಗಸ್ಟ್ 12, 1985 ರಂದು ಅವರು ವಕೀಲರಾಗಿ ಸೇವೆ ಆರಂಭಿಸಿದರು. ಅವರು ವಕೀಲ ಎಸ್. ಎನ್. ಲೋಯಾ ಅವರ ಬಳಿ ಸಿವಿಲ್ ಮತ್ತು ಕ್ರಿಮಿನಲ್ ಕಾನೂನು ಅಭ್ಯಾಸ ಮಾಡಿದ್ದರು. ಅವರು 1990 ರಿಂದ 1992 ರವರೆಗೆ ಔರಂಗಾಬಾದ್‌ನ ಅಂಬೇಡ್ಕರ್ ಕಾನೂನು ಕಾಲೇಜಿನಲ್ಲಿ ಉಪನ್ಯಾಸಕರಾಗಿದ್ದರು.
ಜಸ್ಟಿಸ್ ವರಾಳೆ ಅವರು ಔರಂಗಾಬಾದ್‌ನ ಬಾಂಬೆ ಹೈಕೋರ್ಟ್ ಬೆಂಚ್‌ನಲ್ಲಿ ಸಹಾಯಕ ಸರ್ಕಾರಿ ವಕೀಲರಾಗಿ ಮತ್ತು ಹೆಚ್ಚುವರಿ ಸಾರ್ವಜನಿಕ ಅಭಿಯೋಜಕರಾಗಿ ಮತ್ತು ಯೂನಿಯನ್ ಆಫ್ ಇಂಡಿಯಾದ ಹೆಚ್ಚುವರಿ ಸ್ಥಾಯಿ ಸಲಹೆಗಾರರಾಗಿ ಕೆಲಸ ಮಾಡಿದ್ದಾರೆ. ಅವರು ಜುಲೈ 18, 2008 ರಂದು ಬಾಂಬೆ ಹೈಕೋರ್ಟ್ ನ್ಯಾಯಾಧೀಶರಾಗಿ ನೇಮಕಗೊಂಡರು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!