ಶಿವಸೇನೆಯ ಬಂಡಾಯ ಶಾಸಕರಿಗೆ Y+ ಭದ್ರತೆ ನೀಡಿದ ಕೇಂದ್ರ ಸರ್ಕಾರ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ಮಹಾರಾಷ್ಟ್ರದಲ್ಲಿ ರಾಜಕೀಯ ಪ್ರಕ್ಷುಬ್ಧತೆ ಮುಂದುವರೆದಿದ್ದು, ಭಾನುವಾರ 15 ಶಿವಸೇನೆ ಬಂಡಾಯ ಶಾಸಕರಿಗೆ ಕೇಂದ್ರ ಸರ್ಕಾರವು Y+ ಭದ್ರತೆಯನ್ನು ಒದಗಿಸಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.
ಉದ್ಧವ್ ಠಾಕ್ರೆ ನೇತೃತ್ವದ ಮಹಾ ವಿಕಾಸ್ ಅಘಾಡಿ ಸರ್ಕಾರವು ಬಂಡಾಯ ಶಾಸಕರಿಗೆ ಬಿಸಿ ಮುಟ್ಟಿಸಲು ಅವರಿಗೆ ಮತ್ತು ಅವರ ಕುಟುಂಬ ಸದಸ್ಯರಿಗೆ ನೀಡಿದ್ದ ಭದ್ರತೆಯನ್ನು ಹಿಂತೆಗೆದುಕೊಂಡ ಒಂದು ದಿನದ ಬಳಿಕ ಈ ಬೆಳವಣಿಗೆ ನಡೆದಿದೆ.

ಮಹಾ ಅಘಾಡಿ ಸರ್ಕಾರದ ವಿರುದ್ಧ ಬಂಡೆದಿದ್ದರುವ ಏಕನಾಥ ಶಿಂಧೆ ನೇತೃತ್ವದ 40 ಕ್ಕೂ ಹೆಚ್ಚಿನ ಶಸಕರ ತಂಡವು ಗುವಾಹಟಿಯ ನ್ಯೂ ರ್ಯಾಡಿಸನ್‌ ಹೋಟೆಲ್‌ ನಲ್ಲಿ ಬೀಡುಬಿಟ್ಟಿದೆ. ಈ ಶಾಸಕರು ತಮಗೆ ಸೂಕ್ತ ಭದ್ರತೆ ಒದಗಿಸುವಂತೆ ಕೇಂದ್ರ ಸರ್ಕಾರದ ಬಳಿ ಮನವಿ ಮಾಡಿಕೊಂಡಿದ್ದರು. ಅದರಂತೆ ಕೇಂದ್ರ ಸರ್ಕಾರವು ಶಿವಸೇನೆಯ ಬಂಡಾಯ ಶಾಸಕರಿಗೆ ‘Y+’ ವರ್ಗದ ಸಶಸ್ತ್ರ ಸೆಂಟ್ರಲ್ ರಿಸರ್ವ್ ಪೊಲೀಸ್ ಫೋರ್ಸ್ (CRPF) ಭದ್ರತೆಯನ್ನು ಒದಗಿಸಿದೆ” ಎಂದು ಮೂಲಗಳನ್ನು ಉಲ್ಲೇಖಿಸಿ ಎಎನ್‌ಐ ಸುದ್ದಿ ಸಂಸ್ಥೆಯು ವರದಿ ಮಾಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!