ಮಣಿಪುರದಲ್ಲಿ ಶಾಂತಿ ಮರುಸ್ಥಾಪಿಸಲು ಕೇಂದ್ರ ಕ್ರಮ ತೆಗೆದುಕೊಳ್ಳಬೇಕು: ಸ್ಟಾಲಿನ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಮಣಿಪುರದಲ್ಲಿ ಮಹಿಳೆಯರಿಬ್ಬರ ಮೇಲೆ ನಡೆದಿರುವ ದೌರ್ಜನ್ಯದ ಕುರಿತಾಗಿ ಪ್ರತಿಕ್ರಿಯಿಸಿರುವ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಅವರು, ಮಣಿಪುರದಲ್ಲಿ ಶಾಂತಿ ಮರುಸ್ಥಾಪಿಸಲು ಕೇಂದ್ರ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಸಿಎಂ ಸ್ಟಾಲಿನ್‌, ‘ಮಣಿಪುರದಲ್ಲಿ ಮಹಿಳೆಯರ ಮೇಲೆ ನಡೆದಿರುವ ಹಿಂಸಾಚಾರದಿಂದ ನಾನು ಸಂಪೂರ್ಣವಾಗಿ ದಿಗ್ಭ್ರಮೆಗೊಂಡಿದ್ದೇನೆ. ನಮ್ಮ ಸಾಮೂಹಿಕ ಆತ್ಮಸಾಕ್ಷಿ ಎಲ್ಲಿದೆ? ದ್ವೇಷ ಮತ್ತು ವಿಷವು ಮಾನವೀಯತೆಯನ್ನು ನಾಶಮಾಡುತ್ತಿದೆ. ನಾವು ಇಂತಹ ದೌರ್ಜನ್ಯಗಳ ವಿರುದ್ಧ ಒಟ್ಟಾಗಿ ನಿಲ್ಲಬೇಕು. ಸಹಾನುಭೂತಿ ಮತ್ತು ಗೌರವದ ಸಮಾಜವನ್ನು ಬೆಳೆಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕು. ಮಣಿಪುರದಲ್ಲಿ ಶಾಂತಿಯನ್ನು ಪುನಃಸ್ಥಾಪಿಸಲು ಕೇಂದ್ರ ಸರ್ಕಾರವು ಎಲ್ಲಾ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕು’ ಎಂದು ಆಗ್ರಹಿಸಿದ್ದಾರೆ.

ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಇಬ್ಬರು ಮಹಿಳೆಯರ ಬೆತ್ತಲೆ ಮೆರವಣಿಗೆ ವಿಡಿಯೋಗಳು ಸಾಮಾಜಿಕ ಮಾಧ್ಯಮದಲ್ಲಿ ಹರದಾಡಿದ ಬಗ್ಗೆ ಸ್ಟಾಲಿನ್ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here