ಉದ್ಯೋಗ ಸೃಷ್ಟಿಯಲ್ಲಿ ಹೊಸ ಮೈಲಿಗಲ್ಲು, 10 ಲಕ್ಷ ನೌಕರಿ ನೀಡುವತ್ತ ಮೋದಿ ಚಿತ್ತ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಮುಂದಿನ 18 ತಿಂಗಳುಗಳಲ್ಲಿ ‘ಮಿಷನ್ ಮೋಡ್’ ಯೋಜನೆಯಡಿಯಲ್ಲಿ ಸುಮಾರು 10 ಲಕ್ಷ ಉದ್ಯೋಗ ಸೃಷ್ಟಿ ಮಾಡಬೇಕೆಂದು ಪ್ರದಾನಿ ಮೋದಿ ಸೂಚನೆ ನೀಡಿದ್ದಾರೆ. ಸರ್ಕಾರದ ವಿವಿಧ ಇಲಾಖೆಗಳು, ಸಚಿವಾಲಯಗಳಲ್ಲಿ ನೇಮಕಾತಿ ಮಾಡಿಕೊಳ್ಳಲು ಆದೇಶಿಸಲಾಗಿದೆ. ಮಾನವ ಸಂಪನ್ಮೂಲ ಸಚಿವಾಲಯ, ಎಲ್ಲಾ ಸರ್ಕಾರಿ ಇಲಾಖೆಗಳು ಮತ್ತು ಮಂತ್ರಿಗಳ ಸಭೆಯ ನಂತರ ಪ್ರಧಾನಿ ನರೇಂದ್ರ ಮೋದಿ ಈ ನಿರ್ದೇಶನ ನೀಡಿರುವುದಾಗಿ ಪ್ರಧಾನ ಮಂತ್ರಿ ಕಾರ್ಯಾಲಯ ತಿಳಿಸಿದೆ.

ಹುದ್ದೆಗಳು ಖಾಲಿ ಇದ್ದರೂ ನೇಮಕಾತಿ ನಡೆಯುತ್ತಿಲ್ಲ ಎಂದು ಸಾರ್ವಜನಿಕ ವಲಯದಲ್ಲಿ ಟೀಕೆ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಆಯಾ ಸಚಿವಾಲಯಗಳ ನೇಮಕಾತಿ ಕುರಿತು ಮೋದಿ ಅವರು ಈ ಮಹತ್ವದ ಸಲಹೆ ನೀಡಿರುವುದು ಗಮನಾರ್ಹ. ಏಪ್ರಿಲ್‌ನಲ್ಲಿ ಎಲ್ಲಾ ಕೇಂದ್ರ ಸರ್ಕಾರದ ಕಾರ್ಯದರ್ಶಿಗಳೊಂದಿಗೆ 4 ಗಂಟೆಗಳ ಕಾಲ ನಡೆದ ಮ್ಯಾರಥಾನ್‌ನಲ್ಲಿ ಪ್ರಧಾನಮಂತ್ರಿಯವರು ನೇಮಕಾತಿ ಅಭಿಯಾನದ ಕುರಿತು ಮಾತನಾಡಿದ್ದರು.

ಐದು ರಾಜ್ಯಗಳಲ್ಲಿ ನಡೆದ ಅಸೆಂಬ್ಲಿ ಚುನಾವಣೆಯಲ್ಲಿ, ವಿಶೇಷವಾಗಿ ಉತ್ತರ ಪ್ರದೇಶದಲ್ಲಿ ನಿರುದ್ಯೋಗ ವಿಚಾರವನ್ನಿಟ್ಟುಕೊಂಡು ಪ್ರತಿಪಕ್ಷಗಳು ಆಡಳಿತ ಪಕ್ಷದ ವಿರುದ್ಧ ಬೊಟ್ಟು ಮಾಡಿದ್ದವು. ಪ್ರತಿಪಕ್ಷಗಳ ಬಾಯಿಗೆ ಬೀಗ ಹಾಕಲು ಖಾಲಿ ಹುದ್ದೆಗಳ ಭರ್ತಿಯನ್ನು ತ್ವರಿತಗೊಳಿಸುವ ಮೋದಿ ನಿರ್ದೇಶನವು ಪ್ರಾಮುಖ್ಯತೆ ಪಡೆದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!