ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಭಾರತೀಯ ಸೇನೆ ನಡೆಸಿದ ಆಪರೇಷನ್ ಸಿಂದೂರಕ್ಕೆ ಪ್ರತಿಯಾಗಿ ಪಾಕಿಸ್ತಾನ ನಡೆಸಿದ ಶೆಲ್ ದಾಳಿಯಲ್ಲಿ ಹಾನಿಗೀಡಾದ ಮನೆಗಳಿಗೆ ಕೇಂದ್ರ ಸರ್ಕಾರ ಹೆಚ್ಚುವರಿ ಎರಡು ಲಕ್ಷ ರೂ. ನೀಡಲು ನಿರ್ಧರಿಸಿದೆ.
ಜಮ್ಮು ಮತ್ತು ಕಾಶ್ಮಿರದ ಅನಂತನಾಗ್ ಜಿಲ್ಲೆಯ ಪಹಲ್ಗಾಮ್‌ನಲ್ಲಿ ಉಗ್ರರು ಉಗ್ರರು ನಡೆಸಿದ ನರಮೇಧಕ್ಕೆ ಪ್ರತಿಯಾಗಿ ಭಾರತೀಯ ಸೇನೆ ಆಪರೇಷನ್ ಸಿಂದೂರದ ಮೂಲಕ ದಿಟ್ಟ ಉತ್ತರ ನೀಡಿತ್ತು. ಇದಕ್ಕೆ ‘ಪ್ರತೀಕಾರ’ ಎಂಬ ಪ್ರಯತ್ನದಲ್ಲಿ ಪಾಕ್ ಭಾರತವನ್ನು ಗುರಿಯಾಗಿಸಿ ನಡೆಸಿದ ಶೆಲ್ ದಾಳಿಯಲ್ಲಿ ಬಾರಾಮುಲ್ಲಾ, ಪೂಂಚ್ ಮತ್ತು ಕುಪ್ವಾರಾ ಜಿಲ್ಲೆಯಲ್ಲಿ ನೆಲೆಸಿರುವ ಗಡಿ ಭಾಗದಲ್ಲಿರುವ ಹಲವು ಭಾರತೀಯರ ಮನೆಗಳಿಗೆ ಹಾನಿಯುಂಟು ಮಾಡಿತ್ತು. ಈ ಮೊದಲು ಪ್ರತಿ ಮನೆಗೆ 1.3 ಲಕ್ಷದಂತೆ ಕೇಂದ್ರ ಸರ್ಕಾರ ಪರಿಹಾರ ಘೋಷಿಸಿತ್ತು. ಇದೀಗ ಹೆಚ್ಚುವರಿಯಾಗಿ ಅತಿ ಹೆಚ್ಚು ಹಾನಿಗೀಡಾದ ಮನೆಗಳಿಗೆ ಎರಡು ಲಕ್ಷ ರೂ. ಹೆಚ್ಚುವರಿ ಪರಿಹಾರ ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಭಾಗಶಃ ಹಾನಿಗೀಡಾದ ಮನೆಗಳಿಗೆ ತಲಾ ಒಂದು ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದಿದೆ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ