Sunday, February 5, 2023

Latest Posts

ಸೆಂಚುರಿ ಬಾರಿಸಿದ ಭಾರತ್ ಜೋಡೋ ಯಾತ್ರೆ: ಕಾಂಗ್ರೆಸ್ ನಲ್ಲಿ ಸಂಭ್ರಮ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಹುಲ್‌ ಗಾಂಧಿ ಅವರ ನೇತೃತ್ವದಲ್ಲಿ ಭಾರತ್ ಜೋಡೋ ಯಾತ್ರೆಯು ಯಶಸ್ವಿಯಾಗಿ ನೂರು ದಿನಗಳನ್ನು ಪೂರೈಸಿದೆ.
ಈ ಕುರಿತು ಕಾಂಗ್ರೆಸ್ ನಾಯಕರು ಖುಷಿ ಹಂಚಿಕೊಂಡಿದ್ದು,ಯಾತ್ರೆಯು ದೊಡ್ಡ ಸಾಧನೆಯಾಗಿದೆ ಎಂದು ಹೇಳಿಕೊಂಡಿದ್ದಾರೆ.

ಇಂದು ರಾಜಸ್ಥಾನದಲ್ಲಿ ಭಾರತ್ ಜೋಡೋ ಯಾತ್ರೆ ನಡೆಯುತ್ತಿದ್ದು, ರಾಹುಲ್ ಗಾಂಧಿ, ಕೆ.ಸಿ ವೇಣುಗೋಪಾಲ್ , ಸಚಿನ್ ಪೈಲಟ್ ಹೆಜ್ಜೆ ಹಾಕಿದ್ದಾರೆ.

ಸೆಪ್ಟಂಬರ್ 7ರಂದು ಕನ್ಯಾಕುಮಾರಿಯಿಂದ ಆರಂಭಗೊಂಡ ಭಾರತ್ ಜೋಡೋ ಯಾತ್ರೆ ತಮಿಳುನಾಡು, ಕೇರಳ, ಕರ್ನಾಟಕ, ತೆಲಂಗಾಣ, ಆಂಧ್ರಪ್ರದೇಶ, ಮಹಾರಾಷ್ಟ್ರ ಹಾಗೂ ಮಧ್ಯಪ್ರದೇಶ ಸೇರಿ 8 ರಾಜ್ಯಗಳಲ್ಲಿ ಸಂಚರಿಸಿದ್ದು, ಈಗ ರಾಜಸ್ಥಾನದಲ್ಲಿ ಸಂಚರಿಸುತ್ತಿದೆ.

ಈಗಾಗಲೇ 2,800 ಕಿಮೀ ಕ್ರಮಿಸುವಲ್ಲಿ ರಾಹುಲ್‌ಗಾಂಧಿ ಯಶಸ್ವಿಯಾಗಿದ್ದಾರೆ. ಡಿಸೆಂಬರ್ 24 ರಂದು ಯಾತ್ರೆ ದೆಹಲಿ ಪ್ರವೇಶಿಸಲಿದ್ದು, 8 ದಿನಗಳ ವಿರಾಮದ ನಂತರ ಉತ್ತರ ಪ್ರದೇಶ, ಹರಿಯಾಣ, ಪಂಜಾಬ್ ಹಾಗೂ ಅಂತಿಮವಾಗಿ ಜಮ್ಮು ಮತ್ತು ಕಾಶ್ಮೀರಕ್ಕೆ ತೆರಳಲಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!