ವಿಯೆಟ್ನಾಂ ಪ್ರಧಾನಿ ಫಾಮ್ ಮಿನ್ ಚಿನ್ಹ್ ಗೆ ರಾಷ್ಟ್ರಪತಿ ಭವನದಲ್ಲಿ ವಿಧ್ಯುಕ್ತ ಸ್ವಾಗತ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮೂರು ದಿನಗಳ ಭಾರತ ಪ್ರವಾಸದಲ್ಲಿರುವ ವಿಯೆಟ್ನಾಂ ಪ್ರಧಾನಿ ಫಾಮ್ ಮಿನ್ ಚಿನ್ಹ್ ಅವರಿಗೆ ನವದೆಹಲಿಯ ರಾಷ್ಟ್ರಪತಿ ಭವನದ ಮುಂಭಾಗದಲ್ಲಿ ವಿಧ್ಯುಕ್ತ ಸ್ವಾಗತವನ್ನು ನೀಡಲಾಯಿತು.

ಪ್ರಧಾನಿ ನರೇಂದ್ರ ಮೋದಿ ಅವರು ವಿಯೆಟ್ನಾಂ ಪ್ರಧಾನಿಯನ್ನು ರಾಷ್ಟ್ರಪತಿ ಭವನದಲ್ಲಿ ಬರಮಾಡಿಕೊಂಡರು. ಉಭಯ ನಾಯಕರು ಪರಸ್ಪರ ಶುಭಾಶಯ ಕೋರುತ್ತಾ ಬೆಚ್ಚಗಿನ ಅಪ್ಪುಗೆಯನ್ನು ಹಂಚಿಕೊಂಡರು. ನಂತರ ಅವರು ಸಂಯೋಜಿತ ರಕ್ಷಣಾ ಸೇವೆಗಳಿಂದ ಗೌರವ ಗಾರ್ಡ್ ಅನ್ನು ಪರಿಶೀಲಿಸಿದರು.

ಈ ಸಂದರ್ಭದಲ್ಲಿ ವಿದೇಶಾಂಗ ಸಚಿವ ಎಸ್ ಜೈಶಂಕರ್, ಸಂಸದೀಯ ವ್ಯವಹಾರಗಳ ಕೇಂದ್ರ ಸಚಿವ ಕಿರಣ್ ರಿಜಿಜು, ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ರಾಜ್ಯ ಸಚಿವೆ ಅನುಪ್ರಿಯಾ ಪಟೇಲ್, ಕೇಂದ್ರ ಬಂದರು, ಹಡಗು ಮತ್ತು ಜಲಮಾರ್ಗ ಸಚಿವ ಸರ್ಬಾನಂದ ಸೋನೋವಾಲ್ ಉಪಸ್ಥಿತರಿದ್ದರು.

ಪ್ರಧಾನಿ ಮೋದಿ ಮತ್ತು ಫಾಮ್ ಮಿನ್ ಚಿನ್ಹ್ ಅವರು ಉಭಯ ರಾಷ್ಟ್ರಗಳ ನಿಯೋಗದ ಅಧಿಕಾರಿಗಳನ್ನು ಭೇಟಿ ಮಾಡಿದರು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!