6 ಜನರನ್ನು ಹೊತ್ತೊಯ್ಯುತ್ತಿದ್ದ ಸೆಸ್ನಾ 414 ವಿಮಾನ ಸ್ಯಾನ್ ಡಿಯಾಗೋ ಸಾಗರದಲ್ಲಿ ಪತನ

ಹೊಸದಿಗಂತ ಡಿಜಿಟಲ್ ಡೆಸ್ಕ್:

6 ಜನರನ್ನು ಹೊತ್ತೊಯ್ಯುತ್ತಿದ್ದ ಸೆಸ್ನಾ 414 ವಿಮಾನ ಅಮೆರಿಕದ ದಕ್ಷಿಣ ಕ್ಯಾಲಿಫೋರ್ನಿಯಾದ ಸ್ಯಾನ್ ಡಿಯಾಗೋ ಸಾಗರದಲ್ಲಿ ಪತನಗೊಂಡಿರುವ ಘಟನೆ ನಡೆದಿದೆ.

ಎರಡು ಇಂಜಿನ್ ಹೊಂದಿರುವ ಸೆಸ್ನಾ 414 ವಿಮಾನವು ಭಾನುವಾರ ಮಧ್ಯಾಹ್ನ 12:30ರ ಸುಮಾರಿಗೆ ಟೇಕ್ ಆಫ್ ಆಗಿತ್ತು. ಅದಾದ ಸ್ವಲ್ಪ ಸಮಯದ ನಂತರ ಅಪಘಾತಕ್ಕೀಡಾಗಿದೆ ಎನ್ನಲಾಗಿದೆ.

ಈ ಕುರಿತು ಯುಎಸ್ ಕೋಸ್ಟ್ ಗಾರ್ಡ್ ಅಧಿಕಾರಿಗಳು ತನಿಖೆ ನಡೆಸುತ್ತಿದ್ದು, ಸ್ಯಾನ್ ಡಿಯಾಗೋ ಬಳಿಯ ಕರಾವಳಿ ತೀರದಿಂದ 8 ಕಿ.ಮೀ ದೂರದಲ್ಲಿ ವಿಮಾನ ಪತನಗೊಂಡಿದ್ದು ಅವಶೇಷಗಳಿಗಾಗಿ ಹುಡುಕಾಟ ಆರಂಭಿಸಲಾಗಿದೆ.

 

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!