Monday, August 15, 2022

Latest Posts

ಸಿಇಟಿ 2021 ಪರೀಕ್ಷೆಗೆ ಆನ್‌ಲೈನ್‌ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ವೃತ್ತಿಪರ ಕೋರ್ಸುಗಳ ಪ್ರವೇಶಕ್ಕೆ ಸಿಇಟಿ 2021 ಪರೀಕ್ಷೆ ಬರೆಯಲು ಆನ್‌ಲೈನ್‌ ಅರ್ಜಿ ಸಲ್ಲಿಸುವ ಅವಧಿ ಜು.16ರವರೆಗೆ ವಿಸ್ತರಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ. ಎನ್.‌ ಅಶ್ವಥ್ ನಾರಾಯಣ ತಿಳಿಸಿದ್ದಾರೆ.
ಸಿಇಟಿ ಅರ್ಜಿ ಸಲ್ಲಿಕೆ ಬಗ್ಗೆ ಮಾತನಾಡಿದ ಅವರು, ಜುಲೈ 19ರವರೆಗೂ ಅರ್ಜಿ ಸಲ್ಲಿಕೆ ಜತೆಗೆ ಶುಲ್ಕ ಪಾವತಿ ಮಾಡಲು ಅವಕಾಶ ಕಲ್ಪಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
“ಪೋಷಕರು ಮತ್ತು ವಿದ್ಯಾರ್ಥಿಗಳು ಮನವಿ ನೀಡಿದ ಹಿನ್ನೆಲೆಯಲ್ಲಿ ಅವಧಿ ವಿಸ್ತರಿಸಿ ಆದೇಶ ಮಾಡಲಾಗಿದೆ.
ಹೆಚ್ಚಿನ ಮಾಹಿತಿಗೆ ಇಲಾಖೆಯ http://kea.kar.nic.in ವೆಬ್‌ ಸೈಟ್ ನಿಂದ ವಿವರ ಪಡೆಯಬಹುದು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss