ಸಿಇಟಿ-2024 ಪರೀಕ್ಷೆಯಲ್ಲಿ ಎಡವಟ್ಟು: ಕೆಇಎ ಕಾರ್ಯ ನಿರ್ವಾಹಕ ನಿರ್ದೇಶಕಿ ವರ್ಗಾವಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಎಂಜಿನಿಯರಿಂಗ್, ಕೃಷಿ ಸೇರಿದಂತೆ ಹಲವು ವೃತ್ತಿಪರ ಕೋರ್ಸ್‌ಗಳಿಗೆ ನಡೆದಿದ್ದ ಸಿಇಟಿ-2024 ಪರೀಕ್ಷೆಯಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಎಡವಟ್ಟು ಮಾಡಿಕೊಂಡಿದ್ದು, ನಾಲ್ಕು ವಿಷಯಗಳಿಂದ ಒಟ್ಟು 50 ಪ್ರಶ್ನೆಗಳು ಔಟ್ ಆಫ್ ಸಿಲೆಬಸ್ ಬಂದಿತ್ತು. ಇದರಿಂದ ವಿದ್ಯಾರ್ಥಿಗಳು, ಪೋಷಕರು ಹಾಗೂ ಉಪನ್ಯಾಸಕರಿಂದಲ್ಲೂ ಭಾರಿ ಆಕ್ರೋಶಕ್ಕೆ ಕಾರಣವಾಗಿತ್ತು.

ಇದರ ಬೆನ್ನಲ್ಲೇ ಕೆಇಎ ಕಾರ್ಯ ನಿರ್ವಾಹಕ ನಿರ್ದೇಶಕಿ ಎಸ್‌. ರಮ್ಯಾ (ಐಎಎಸ್‌) ಅವರನ್ನೇ ತಲೆದಂಡ ಮಾಡಲಾಗಿದೆ.
ಸಿಇಟಿ ಪರೀಕ್ಷೆಯಲ್ಲಿ ಸಾಲು ಸಾಲು ವಿವಾದವನ್ನು ರಮ್ಯಾ ಅವರು ಎಳೆದುಕೊಂಡಿದ್ದರು. ಇದೀಗ ರಾಜ್ಯ ಸರ್ಕಾರವು ರಮ್ಯಾರನ್ನು ಎತ್ತಂಗಡಿ ಮಾಡಿ, ಅವರ ಜಾಗಕ್ಕೆ ತಾಂತ್ರಿಕ ಶಿಕ್ಷಣ ಇಲಾಖೆ ನಿರ್ದೇಶಕ ಪ್ರಸನ್ನ ಅವರಿಗೆ ಹೆಚ್ಚುವರಿ ಹೊಣೆಗಾರಿಕೆ ನೀಡಿ ಸರ್ಕಾರ ಆದೇಶ ಹೊರಡಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!