ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮೇ 20 ಮತ್ತು 21ರಂದು 2023ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ನಡೆಸಲಿದೆ. ಇಂಜಿನಿಯರಿಂಗ್, ಕೃಷಿ ವಿಜ್ಞಾನ, ವೆರ್ಟನರಿ, ಬಿ. ಎಸ್. ಸಿ (ನರ್ಸಿಂಗ್) ಮುಂತಾದ ವೃತ್ತಿಪರ ಕೋರ್ಸುಗಳ ಪ್ರವೇಶಕ್ಕಾಗಿ ನಡೆಯುವ ಸಾಮಾನ್ಯ ಪ್ರವೇಶ ಪರೀಕ್ಷೆ ಇದಾಗಿದೆ.
ಮೇ 20ರಂದು ಬೆಳಗ್ಗೆ 10.30 ಗಂಟೆಯಿಂದ 11.50 ಗಂಟೆಯವರೆಗೆ ಜೀವಶಾಸ್ತ್ರ ಹಾಗೂ ಮಧ್ಯಾಹ್ನ 2.30 ರಿಂದ 3.50 ಗಂಟೆಯವರೆಗೆ ಗಣಿತ ಪರೀಕ್ಷೆ ನಡೆಯಲಿದೆ. ಮೇ 21 ರಂದು ಬೆಳಗ್ಗೆ 10.30 ಗಂಟೆಯಿಂದ 11.50 ಗಂಟೆಯವರೆಗೆ ಭೌತಶಾಸ್ತ್ರ ಹಾಗೂ ಮಧ್ಯಾಹ್ನ 2.30 ರಿಂದ 3.50 ಗಂಟೆಯವರೆಗೆ ರಾಸಾಯನಶಾಸ್ತ್ರ ಪರೀಕ್ಷೆ ನಡೆಯಲಿದೆ.
ವಿದ್ಯಾರ್ಥಿಗಳಿಗೆ ಸೂಚನೆಗಳು ಹೀಗಿವೆ:
ಸಿಇಟಿ ಪರೀಕ್ಷೆಗೆ ಆಗಮಿಸುವ ವಿದ್ಯಾರ್ಥಿಗಳು ಪರೀಕ್ಷಾ ಕೊಠಡಿಗೆ ಯಾವುದೇ ರೀತಿಯ ಕೈಗಡಿಯಾರವನ್ನು ಕಟ್ಟಿಕೊಂಡು ಅಥವಾ ತೆಗೆದುಕೊಂಡು ಹೋಗುವಂತಿಲ್ಲ.
ಕ್ಯಾಲ್ಕುಲೇಟರ್ ಅಥವಾ ಲಾಗ್ ಟೇಬಲ್‌ಗಳ ಉಪಯೋಗವನ್ನು ಪರೀಕ್ಷಾ ಸಮಯದಲ್ಲಿ ನಿಷೇಧಿಸಲಾಗಿದೆ.
ಪರೀಕ್ಷಾ ಕೊಠಡಿ ಒಳಗೆ ಯಾವುದೇ ರೀತಿಯ ಆಧುನಿಕ ಎಲೆಕ್ಟ್ರಾನಿಕ್ ಉಪಕರಣಗಳನ್ನು (ಮೊಬೈಲ್, ಬ್ಲೂ ಟೂತ್, ಸ್ಲೈಡ್ ರೂಲ್ಸ್, ಕ್ಯಾಲ್ಕುಲೇಟರ್, ವೈಟ್ ಪ್ಲೂಯಿಡ್, ವೈಯರ್ ಲೆಸ್ ಸೆಟ್ಸ್ ಮತ್ತಿತರ) ನಿಷೇಧಿಸಲಾಗಿದೆ.