Wednesday, June 29, 2022

Latest Posts

20 ದಿನಗಳಲ್ಲೇ ಸಿಇಟಿ ಪರೀಕ್ಷೆ ಫಲಿತಾಂಶ ಪ್ರಕಟ: ಸಚಿವ ಅಶ್ವತ್ಥ ನಾರಾಯಣ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸದಿಗಂತ ಆನ್‌ಲೈನ್ ಡೆಸ್ಕ್:

ರಾಜ್ಯಾದ್ಯಂತ ಇಂದಿನಿಂದ ಸಿಇಟಿ ಪರೀಕ್ಷೆ ನಡೆಯುತ್ತಿದ್ದು, 20 ದಿನಗಳಲ್ಲಿ ಫಲಿತಾಂಶ ಪ್ರಕಟವಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿ, ಈ ತಿಂಗಳ 30ಕ್ಕೆ ಪರೀಕ್ಷೆ ಮುಗಿಯುತ್ತದೆ. ಇನ್ನು 20 ದಿನಗಳಲ್ಲಿ ಫಲಿತಾಂಶ ಪ್ರಕಟವಾಗುವುದು. ಅಕ್ಟೋಬರ್‌ನಲ್ಲಿ ಕೌನ್ಸಿಲಿಂಗ್ ಪ್ರಕ್ರಿಯೆ ಆರಂಭವಾಗಲಿದೆ ಎಂದಿದ್ದಾರೆ.
ರಾಜ್ಯದ ಎಲ್ಲಾ ಭಾಗಗಳಲ್ಲಿ ಪರೀಕ್ಷೆ ಸುಸೂತ್ರವಾಗಿ ನಡೆಯುತ್ತಿದೆ. ಯಾವ ಸಮಸ್ಯೆ ಆಗಿಲ್ಲ ಎಂದಿದ್ದಾರೆ. ಕೊರೋನಾ ಗೈಡ್‌ಲೈನ್ಸ್ ಫಾಲೋ ಮಾಡಿದ್ದು, ಪಾಸಿಟಿವ್ ಇರುವ ವಿದ್ಯಾರ್ಥಿಗಳಿಗೆ ಪ್ರತ್ಯೇಕ ವ್ಯವಸ್ಥೆ ಮಾಡಿ ಪರೀಕ್ಷೆ ಬರೆಸಲಾಗಿದೆ ಎಂದು ಹೇಳಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss