ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………
ಹೊಸದಿಗಂತ ಆನ್ಲೈನ್ ಡೆಸ್ಕ್:
ಇಂದು ರಾಜ್ಯಾದ್ಯಂತ ಸಿಇಟಿ ಪರೀಕ್ಷೆ ಆರಂಭವಾಗಿದ್ದು, 530 ಕೇಂದ್ರಗಳಲ್ಲಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ.
ರಾಜ್ಯಾದ್ಯಂತ ಒಟ್ಟು 2,01,816 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಸಿದ್ದಾರೆ. ಕೊರೋನಾ ಹಿನ್ನೆಲೆ ಪರೀಕ್ಷಾ ಕೇಂದ್ರಗಳಲ್ಲಿ ಮುನ್ನೆಚ್ಚರಿಕೆಯೊಂದಿಗೆ ಪರೀಕ್ಷೆ ನಡೆಸಲು ಕ್ರಮ ಕೈಗೊಳ್ಳಲಾಗಿದೆ.
ಇಂದು ಜೀವವಿಜ್ಞಾನ ಮತ್ತು ಗಣಿತ ಪರೀಕ್ಷೆ ನಡೆಯಲಿದ್ದು, ನಾಳೆ ಭೌತವಿಜ್ಞಾನ ಮತ್ತು ರಸಾಯನ ವಿಜ್ಞಾನ ವಿಷಯಗಳ ಪರೀಕ್ಷೆ ನಡೆಯಲಿದೆ.
ಹೊರನಾಡು ಹಾಗೂ ಗಡಿಭಾಗದ ವಿದ್ಯಾರ್ಥಿಗಳಿಗೆ ರಾಜ್ಯದ ಆರು ಸ್ಥಳಗಳಲ್ಲಿ ಆ.30 ರಂದು ಕನ್ನಡ ಪರೀಕ್ಷೆ ನಡೆಯಲಿದೆ.
ಬೆಂಗಳೂರು, ಬೀದರ್, ವಿಜಯಪುರ, ಬಳ್ಳಾರಿ, ಬೆಳಗಾವಿ ಮತ್ತು ಮಂಗಳೂರಿನಲ್ಲಿ ಪರೀಕ್ಷೆ ನಡೆಯಲಿದ್ದು, 1,682 ವಿದ್ಯಾರ್ಥಿಗಳು ನೋಂದಣಿ ಮಾಡಿಸಿಕೊಂಡಿದ್ದಾರೆ.