ಸಿಇಟಿ ಕೀ ಆನ್ಸರ್ಸ್ ಪ್ರಕಟ: ಈ ವಿಷಯದಲ್ಲಿ ಮಾತ್ರ ಒಂದು ಪ್ರಶ್ನೆಗೆ ಗ್ರೇಸ್‌ ಮಾರ್ಕ್ಸ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಾಜ್ಯದಲ್ಲಿ ಇತ್ತೀಚೆಗೆ ನಡೆದ ಸಾಮಾನ್ಯ ಪ್ರವೇಶ ಪರೀಕ್ಷೆ2025ರ ಪರಿಷ್ಕೃತ ಕೀ ಉತ್ತರಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ.

ಸಿಇಟಿ ಪರೀಕ್ಷೆ ನಡೆಸಲಾದ 16 ವರ್ಷನ್‌ಗಳ ಪ್ರಶ್ನೆ ಪತ್ರಿಕೆಗೂ ಕೀ ಉತ್ತರಗಳನ್ನು ಪ್ರಕಟಿಸಲಾಗಿದ್ದು, ಭೌತಶಾಸ್ತ್ರದ ಒಂದು ಪ್ರಶ್ನೆ ಮಾತ್ರ ಉತ್ತರದ ಆಯ್ಕೆ ಸರಿಯಾಗಿಲ್ಲದ್ದರಿಂದ ಒಂದು ಕೃಪಾಂಕವನನ್ನು ನೀಡಲಾಗಿದೆ.

ಯುಜಿಸಿಇಟಿ 2025ರ ಪರೀಕ್ಷೆಯ ಭೌತಶಾಸ್ತ್ರ, ರಸಾಯನಶಾಸ್ತ್ರ, ಗಣಿತಶಾಸ್ತ್ರ ಮತ್ತು ಜೀವಶಾಸ್ತ್ರ ವಿಷಯಗಳಿಗೆ ಸಂಬಂಧಿಸಿದಂತೆ ಏ.16 ಮತ್ತು ಏ.17ರಂದು ಪರೀಕ್ಷೆಗಳನ್ನು ನಡೆಸಲಾಗಿದೆ. ಸದರಿ ಪರೀಕ್ಷೆಗಳ 16 ವರ್ಷನ್‌ಗಳ ಕೀ ಉತ್ತರಗಳನ್ನು ಏ.18ರಂದು ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿತ್ತು. ಜೊತೆಗೆ, ಸದರಿ ಕೀ-ಉತ್ತರಗಳಿಗೆ ಆಕ್ಷೇಪಣೆಗಳಿದ್ದಲ್ಲಿ ಏ.22ರ ಒಳಗಾಗಿ ಸಲ್ಲಿಕೆ ಮಾಡುವುದಕ್ಕೆ ಕಾಲಾವಕಾಶ ನೀಡಲಾಗಿತ್ತು.

ಅದರಂತೆ ಪ್ರಾಧಿಕಾರದಲ್ಲಿ ಸ್ವೀಕೃತವಾದ ಆಕ್ಷೇಪಣೆಗಳನ್ನು ವಿಷಯ ತಜ್ಞರ ಸಮಿತಿಗಳ ಮೂಲಕ ಪರಿಶೀಲಿಸಿ, ವಿಷಯ ತಜ್ಞರ ಸಮಿತಿಗಳ ಶಿಫಾರಸ್ಸಿನಂತೆ ಭೌತಶಾಸ್ತ್ರ, ರಸಾಯನಶಾಸ್ತ್ರ, ಮತ್ತು ಜೀವಶಾಸ್ತ್ರ ವಿಷಯಗಳಲ್ಲಿ ಬದಲಾವಣೆಗೊಂಡ ಪ್ರಶ್ನೆಗಳ ಪರಿಷ್ಕೃತ ಕೀ ಉತ್ತರಗಳನ್ನು ಪ್ರಕಟಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!