ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇಂದ್ರೀಯ ಉಗ್ರಾಣ ನಿಗಮದಲ್ಲಿ 153 ಅಸಿಸ್ಟೆಂಟ್ ಇಂಜಿನಿಯರ್, ಅಕೌಂಟೆಂಟ್,
ಸೂಪರಿಂಟೆಂಡೆಂಟ್ ಮತ್ತು ಜ್ಯೂನಿಯರ್ ಟೆಕ್ನಿಕಲ್ ಅಸಿಸ್ಟೆಂಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಇಂಜಿನಿಯರಿಂಗ್ ಪದವಿ, ಸಿಎ, ಬಿ.ಎ, ಬಿ.ಕಾಂ, ಸ್ನಾತಕೋತ್ತರ ಪದವಿ, ಕೃಷಿ ಪದವಿ
ವಿದ್ಯಾರ್ಹತೆ ಜೊತೆಗೆ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆನ್‌ಲೈನ್ ಪರೀಕ್ಷೆ, ದಾಖಲೆ ಪರಿಶೀಲನೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 29,000/- ರಿಂದ 1,40,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.
ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಸೆಪ್ಟೆಂಬರ್ 24,2023ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.