ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷ ಕೆ. ಜಯಪ್ರಕಾಶ್ ಹೆಗ್ಡೆ ಅವರ ಅಧಿಕಾರ ಅವಧಿಯನ್ನು ಮತ್ತೊಂದು ತಿಂಗಳು ವಿಸ್ತರಣೆ ಮಾಡಿ (ಫೆ.1ರಿಂದ ಫೆ.29ರವರೆಗೆ) ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷ ಕೆ.ಜಯಪ್ರಕಾಶ ಹೆಗ್ಡೆ ಅವರಿಗೆ ಜಾತಿಗಣತಿ ವರದಿ ಸಲ್ಲಿಕೆ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ. ಇನ್ನು ಜಯಪ್ರಕಾಶ್ ಹೆಗ್ಡೆ ಅವರ ಅವಧಿಯನ್ನು ಈಗಾಗಲೇ ವಿಸ್ತರಣೆ ಮಾಡಿ ಅವಕಾಶ ನೀಡಲಾಗಿತ್ತು. ಇನ್ನು ಜಯಪ್ರಕಾಶ್ ಹೆಗ್ಡೆ ಅವರ ಅಧಿಕಾರ ಜ.31ಕ್ಕೆ ಮುಕ್ತಾಯವಾಗಲಿದೆ. ಆದರೆ, ಜಾತಿಗಣತಿ ವರದಿ ಸಲ್ಲಿಕೆಗೆ ಇನ್ನೂ ಒಂದು ತಿಂಗಳು ಕಾಲಾವಕಾಶ ಬೇಕು ಎಂದು ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಸರ್ಕಾರಕ್ಕೆ ತಿಳಿಸಿದ್ದರು. ಈ ಹಿನ್ನೆಲೆಯಲ್ಲಿ ಸರ್ಕಾರದಿಂದ ಶಾಶ್ವತ ಹಿಂದುಳಿದ ವರ್ಗದ ಆಯೋಗದ ಅಧ್ಯಕ್ಷ ಕೆ.ಜಯಪ್ರಕಾಶ್ ಹೆಗ್ಡೆ ಅವರ ಅಧಿಕಾರಾವಧಿಯನ್ನು ಒಂದು ತಿಂಗಳ ಕಾಲ (ಫೆ.1ರಿಂದ ಫೆ.29ರವರೆಗೆ) ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ.