Tuesday, October 3, 2023

Latest Posts

ಚೈತ್ರಾಗೆ ಫಿಟ್ಸ್ ಬಂದಿಲ್ಲ, ಆರೋಗ್ಯ ಸ್ಥಿರ: ವಿಕ್ಟೋರಿಯಾ ಆಸ್ಪತ್ರೆ ವೈದ್ಯೆ ಮಾಹಿತಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

5 ಕೋಟಿ ಡೀಲ್‌ನಲ್ಲಿ ಸಿಸಿಬಿ ಪೊಲೀಸರ ಬಂಧನದಲ್ಲಿರುವ ಚೈತ್ರಾ ಕುಂದಾಪುರ ಅವರಿಗೆ ಅನಾರೋಗ್ಯದ ಹಿನ್ನಲೆಯಲ್ಲಿ ಇಂದು(ಶುಕ್ರವಾರ) ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ದಾಖಲಾಗಿದ್ದು, ಈ ವೇಳೆ ಪಿಡ್ಸ್‌ ಬಂದಿದೆ .

ಆದ್ರೆ ಇದೀಗ ಚೈತ್ರಾ ಕುಂದಾಪುರಗೆ ಫಿಟ್ಸ್ ಬಂದಿಲ್ಲ, ಆರೋಗ್ಯ ಸ್ಥಿರವಾಗಿದೆ ಎಂದು ವಿಕ್ಟೋರಿಯಾ ಆಸ್ಪತ್ರೆ ವೈದ್ಯೆ ಡಾ.ಆಸೀಮಾ ಸ್ಪಷ್ಟನೆ ನೀಡಿದ್ದಾರೆ.

ಇಂದು ಮಹಿಳಾ ಸಾಂತ್ವನ ಕೇಂದ್ರದಲ್ಲಿ ಕುಸಿದು ಬಿದ್ದ ಚೈತ್ರಾ ಕುಂದಾಪುರ ಅವರನ್ನು ಆಸ್ಪತ್ರೆಗೆದಾಖಲಿಸಲಾಗಿತ್ತು.

ಚೈತ್ರಾ ಆರೋಗ್ಯದ ಬಗ್ಗೆ ಅಪ್ ಡೇಟ್ ನೀಡಿದ ವಿಕ್ಟೋರಿಯಾ ಆಸ್ಪತ್ರೆ ವೈದ್ಯೆ ಡಾ.ಆಸೀಮಾ ‘ ಆಸ್ಪತ್ರೆಗೆ ಕರೆದುಕೊಂಡು ಬಂದಾಗ ಚೈತ್ರಾಗೆ ಫಿಟ್ಸ್ ಇರಲಿಲ್ಲ, ಎಲ್ಲಾ ರೀತಿಯ ಸ್ಕ್ಯಾನಿಂಗ್ ಮಾಡಲಾಗಿದೆ. ಸದ್ಯಕ್ಕೆ ಐಸಿಯುನಲ್ಲಿ ಚೈತ್ರಾಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಹೇಳಿಕೆ ನೀಡಿದ್ದಾರೆ.

ಸದ್ಯ ಚೈತ್ರಾ ಕುಂದಾಪುರ ಆರೋಗ್ಯದಲ್ಲಿ ಸುಧಾರಣೆ ಕಂಡುಬಂದಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಎಲ್ಲಾ ರೀತಿಯ ಚೆಕಪ್ ಮಾಡುವಂತೆ ಸಿಸಿಬಿ ಪೊಲೀಸರು ವಿಕ್ಟೋರಿಯಾ ಅಸ್ಪತ್ರೆಯ ವೈದ್ಯರಿಗೆ ಮನವಿ ಮಾಡಿದ್ದಾರೆ.
ಡಿಸ್ಚಾರ್ಜ್ ಯಾವಾಗ ಎಂಬ ಬಗ್ಗೆ ಇನ್ನೂ ಸ್ಪಷ್ಟ ಮಾಹಿತಿ ಸಿಕ್ಕಿಲ್ಲ. ಎಲ್ಲಾ ತಪಾಸಣೆ ನಂತರ ವೈದ್ಯರು ಡಿಸ್ಚಾರ್ಜ್ ಬಗ್ಗೆ ನಿರ್ಧರಿಸಲಿದ್ದಾರೆ.

ಎಂಎಲ್ ಎ ಟಿಕೆಟ್ ಕೊಡಿಸುವುದಾಗಿ ಉದ್ಯಮಿ ಒಬ್ಬರಿಗೆ 5 ಕೋಟಿ ವಂಚನೆ ಪ್ರಕರಣದಲ್ಲಿ ಬಂಧನಕ್ಕೀಡಾಗಿರುವ ಹಿಂದೂ ಹೋರಾಟಗಾರ್ತಿ ಚಿತ್ರಾ ಕುಂದಾಪುರ ಮೂರ್ಛೆ ರೋಗದಿಂದ ಬಳಲುತ್ತಿದ್ದಾರೆ ಎಂದು ಹೇಳಲಾಗಿತ್ತು.

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!