ಹೊಸದಿಗಂತ ವರದಿ ಹುಬ್ಬಳ್ಳಿ:
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಬೆಂಗಳೂರು, ಉಡುಪಿ ಜಿಲ್ಲಾ ಕಾರ್ಯನಿರತ ಸಂಘದಿಂದ ಮಣಿಪಾಲ ಕೆಎಂಸಿ ಆಸ್ಪತ್ರೆಯ ಡಾ.ಟಿಎಂಎಪೈ ಆಡಿಟೋರಿಯಂನಲ್ಲಿ ಆಯೋಜಿಸಲಾಗಿದ್ದ ರಾಜ್ಯದ ಪತ್ರಕರ್ತರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಚೈತ್ರಾ ಜಯರಾಜ್ ಗೋವಿ ಭಾಜನರಾದರು.
ಇವರು ಉ.ಕ ಜಿಲ್ಲೆಯ ಯಲ್ಲಾಪುರದ ಹೊಸದಿಗಂತ ವರದಿಗಾರರಾದ ಪ್ರಭಾವತಿ ಗೋವಿ, ವರದಿಗಾರ ಜಯರಾಜ ಗೋವಿ ದಂಪತಿಯ ಪುತ್ರಿ.
ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ವಿಧಾನಸಭಾಧ್ಯಕ್ಷ ಯು.ಟಿ.ಖಾದರ, ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು. ಮಣಿಪಾಲ ಮಾಹೆ ಪ್ರೊ ಚಾನ್ಸಲರ್ ಡಾ.ಎಚ್.ಎಸ್. ಬಲ್ಲಾಳ್, ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ, ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ಅವಿನಾಶ್ ಶೆಟ್ಟಿ, ಜಿಲ್ಲಾಧಿಕಾರಿ ಎಂ.ಕೂರ್ಮರಾವ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ ಮಚ್ಚಿಂದ್ರ ಹಾಕೆ ಇನ್ನಿತರರು ಇದ್ದರು.