ಹೊಸದಿಗಂತ ಡಿಜಿಟಲ್ ಡೆಸ್ಕ್:
ಉದ್ಯಮಿಯೊಬ್ಬರಿಗೆ ಕೋಟಿ ಕೋಟಿ ರೂಪಾಯಿ ವಂಚಿಸಿದ ಆರೋಪದಲ್ಲಿ ಸಾಮಾಜಿಕ ಕಾರ್ಯಕರ್ತೆ ಚೈತ್ರಾ ಕುಂದಾಪುರ ಸೇರಿ ಇಬ್ಬರನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಉದ್ಯಮಿ ಗೋವಿಂದ್ ಪೂಜಾರಿ ನೀಡಿರುವ ದೂರು ಅನ್ವಯ ಕೇಸ್ ದಾಖಲಾಗಿದೆ. ಉಡುಪಿಯಲ್ಲಿ ಚೈತ್ರಾ ಹಾಗೂ ಇನ್ನಿಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಗೋವಿಂದ್ ಪೂಜಾರಿ ಬಂಡೇಪಾಳ್ಯ ಪೊಲೀಸ್ ಠಾಣೆಯಲ್ಲಿ ಚೈತ್ರಾ ವಿರುದ್ಧ ದೂರು ದಾಖಲಿಸಿದ್ದರು. ಬೈಂದೂರು ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಹೇಳಿ ಐದು ಕೋಟಿ ರೂಪಾಯಿ ಪಡೆದು ವಂಚನೆ ಮಾಡಿದ್ದಾರೆ ಎಂದು ದೂರಿನಲ್ಲಿ ಹೇಳಲಾಗಿದೆ.
ಕೆಲ ದಿನಗಳಿಂದ ಸಿಸಿಬಿ ಪೊಲೀಸರು ಚೈತ್ರಾಗಾಗಿ ಹುಡುಕಾಟ ನಡೆಸಿದ್ದರು. ಉಡುಪಿ ಹಾಗೂ ಬೆಂಗಳೂರಿನಲ್ಲಿ ಹುಡುಕಾಟ ನಡೆಸಿದ್ದು, ಉದುಪಿಯಲ್ಲಿ ಚೈತ್ರಾರನ್ನು ವಶಕ್ಕೆ ಪಡೆಯಲಾಗಿದೆ. ಜೊತೆಗೆ ಇನ್ನೂ ಇಬ್ಬರನ್ನು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಯಲಿದೆ.