ಹೊಸದಿಗಂತ ಡಿಜಿಟಲ್ ಡೆಸ್ಕ್:
ಕನ್ನಡದ ಬಿಗ್ ರಿಯಾಲಿಟಿ ಶೋ ಬಿಗ್ಬಾಸ್ ಗೆ ಯಾವೆಲ್ಲಾ ಸೆಲೆಬ್ರಿಟಿಗಳು ಎಂಟ್ರಿ ಕೊಡಲಿದ್ದಾರೆ ಎಂದು ಕುತೂಹಲ ಹೆಚ್ಚಾಗುತ್ತಿದ್ದು, ಮೊದಲ ಬಾರಿಗೆ ಬಿಗ್ಬಾಸ್ ಶುರುವಾಗುವ ಮುನ್ನವೇ ಐದು ಸ್ಪರ್ಧಿಗಳು ಯಾರು ಅಂತ ಗೊತ್ತಾಗಿದೆ.
ಈಗಾಗಲೇ ಮೂರು ಸ್ಪರ್ಧಿಗಳ ಹೆಸರನ್ನು ಅಧಿಕೃತವಾಗಿ ರಾಜಾ ರಾಣಿ ಗ್ರ್ಯಾಂಡ್ ಫಿನಾಲೆಯಲ್ಲಿ ರಿವೀಲ್ ಮಾಡಲಾಗಿದೆ. ಬಿಗ್ಬಾಸ್ಗೆ ಹೋಗುವ ಮೊದಲ ಸ್ಪರ್ಧಿಗಳ ಹೆಸರನ್ನು ರಿವೀಲ್ ಮಾಡಲಾಗಿದೆ. ಸುಮಾರು ಮೂರ್ನಾಲ್ಕು ವರ್ಷಗಳಿಂದ ವೀಕ್ಷಕರನ್ನ ರಂಜಿಸುತ್ತಾ ಬಂದಿದ್ದ ಸತ್ಯ ಧಾರಾವಾಹಿಯ ಖ್ಯಾತ ನಟಿ ಗೌತಮಿ ಜಾಧವ್ ಅವರು ಎಂಟ್ರಿ ಕೊಟ್ಟಿದ್ದಾರೆ. ಎರಡನೇ ಸ್ಪರ್ಧಿಯಾಗಿ ರಾಜಾ ರಾಣಿ ಗ್ರ್ಯಾಂಡ್ ಫಿನಾಲೆ ವೇದಿಕೆಗೆ ಲಾಯರ್ ಜಗದೀಶ್ ಎಂಟ್ರಿ ಕೊಟ್ಟಿದ್ದರು.
ಇದೀಗ ಬಿಗ್ಬಾಸ್ ಸೀಸನ್ 11ಕ್ಕೆ ಚೈತ್ರಾ ಕುಂದಾಪುರ ಬಂದಿದ್ದಾರೆ. ಪ್ರಖರ ಭಾಷಣಗಾರ್ತಿ ಇವರು ಉಡುಪಿ ಜಿಲ್ಲೆ ಕುಂದಾಪುರದವರು. ಪತ್ರಕರ್ತೆಯಾಗಿ, ನಿರೂಪಕಿಯಾಗಿ ಭಾಷಣಕಾರರಾಗಿ ಗಮನ ಸೆಳೆದಿದ್ದಾರೆ.
ಇದರ ಜೊತೆಗೆ ಉದ್ಯಮಿಗೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ಕೊಡಿಸ್ತೇನೆ ಎಂದು ಆಮಿಷ ಒಡ್ಡಿ 7 ಕೋಟಿ ರೂಪಾಯಿ ಹಣವನ್ನು ವಸೂಲಿ ಮಾಡಿದ್ದರು ಅನ್ನೋ ಆರೋಪ ಕೇಳಿ ಬಂದಿದೆ. ಈ ಆರೋಪದ ಮೇಲೆ ಬೆಂಗಳೂರಿನ ಸಿಸಿಬಿ ಪೊಲೀಸರು ಚೈತ್ರಾ ಕುಂದಾಪುರ ಅರೆಸ್ಟ್ ಕೂಡ ಮಾಡಿದ್ದರು.