ಚೈತ್ರಾ ಕುಂದಾಪುರ, ಅವಳ ಗಂಡ ಎಲ್ರೂ ಕಳ್ರು: ಮಗಳ ವಿರುದ್ಧವೇ ಸಿಡಿದೆದ್ದ ತಂದೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಬಿಗ್‌ಬಾಸ್‌ ಖ್ಯಾತಿಯ ಚೈತ್ರಾ ಕುಂದಾಪುರ ಇತ್ತೀಚೆಗಷ್ಟೇ ಹಸೆಮಣೆ ಏರಿದ್ದಾರೆ. ಈ ಬೆನ್ನಲ್ಲೇ ಚೈತ್ರಾ ತಂದೆ ಮಾಧ್ಯಮಗಳ ಮುಂದೆ ನಿಂತು ಮಗಳ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಬಾಲಕೃಷ್ಣ ನಾಯ್ಕ್ ಅವರು ಮಾತನಾಡಿ, ಆಕೆ ನನ್ನನ್ನು ಮದುವೆಗೆ ಕರೆದಿಲ್ಲ. ನಾನು ಮದುವೆಗೆ ಹೋಗಿಲ್ಲ. ಈ ಮದುವೆಯನ್ನು ನಾನು ಒಪ್ಪಲಾರೆ. ಚೈತ್ರಾ ಮತ್ತು ಆಕೆಯ ಪತಿ ಇಬ್ಬರೂ ಕಳ್ಳರು. ನನ್ನ ಪತ್ನಿ ಕೂಡ ಚೈತ್ರಾ ಬೆಂಬಲಕ್ಕೆ ನಿಂತಿದ್ದಾಳೆ. ಇವರೆಲ್ಲ ಹಣದ ಆಸೆಗಾಗಿ ಹೀಗೆ ಮಾಡುತ್ತಿದ್ದಾರೆ. ಗೋವಿಂದ ಬಾಬು ಪೂಜಾರಿ ಪ್ರಕರಣದಲ್ಲೂ ಇವರು ಹಣ ಹಂಚಿಕೊಂಡಿದ್ದಾರೆ. ನನಗೆ ನನ್ನ ದೊಡ್ಡ ಮಗಳು ಮಾತ್ರ ಆಸರೆ. ನನ್ನ ದೊಡ್ಡ ಮಗಳು ಗಾಯತ್ರಿ ನಿರಪರಾಧಿ. ನಾನು ಮತ್ತು ನನ್ನ ದೊಡ್ಡ ಮಗಳು ಮರ್ಯಾದೆಯಿಂದ ಬದುಕುತ್ತಿದ್ದೇವೆ.

ಚೈತ್ರಾ ಬಿಗ್​ಬಾಸ್ ಮನೆಗೆ ಹೋಗುವಾಗಲೂ ನನಗೆ ಹೇಳಿಲ್ಲ. ನನ್ನ ಪತ್ನಿ ನನ್ನನ್ನು ಜಗಲಿಯಲ್ಲಿ ಬಿಟ್ಟು ಬೇಗ ಹಾಕಿ ಬಿಗ್​ಬಾಸ್​ಗೆ ಹೋಗಿದ್ದಳು. ನಾನು ಕಟ್ಟಿದ ಮನೆಯಲ್ಲಿ ಈಗ ನಾನೇ ಅನಾಥವಾಗಿದ್ದೇನೆ. ನನ್ನ ಮಗಳು ಎಂದು ಹೇಳಲು ನಾಚಿಕೆಯಾಗುತ್ತದೆ. ಆಕೆ ನನ್ನ ಜೀವನದಲ್ಲಿ ಬರಲೇಬಾರದು ಜನ ಆಕೆಗೆ ಮನ್ನಣೆ ಕೊಡಬಾರದು. ತಂದೆ ಇಲ್ಲದ ಮಗಳು ಎಂದು ಹೇಳಿಕೊಂಡು ಬರುತ್ತಾಳೆ. ನನ್ನ ತಂದೆ ಬಾಲ ನಾಯ್ಕ್ ಗೌರವಾನ್ವಿತ ವ್ಯಕ್ತಿಯಾಗಿದ್ದರು ಎಂದು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!