ಭಾರತದ ವಿರುದ್ಧ ಏಕದಿನ ಸರಣಿಗೆ ತಂಡ ಪ್ರಕಟಿಸಿದ ಜಿಂಬಾಬ್ವೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ 
ಭಾರತ ತಂಡದ ವಿರುದ್ಧ ಸರಣಿಗೆ ಜಿಂಬಾಂಬ್ವೆ ತಂಡ ಪ್ರಕಟವಾಗಿದ್ದು, ವಿಕೆಟ್‌ಕೀಪರ್ ಬ್ಯಾಟ್ಸ್‌ಮನ್ ರೆಗಿಸ್ ಚಕಬ್ವಾ ಜಿಂಬಾಬ್ವೆ ತಂಡವನ್ನು ಮುನ್ನಡೆಸಲಿದ್ದಾರೆ. ನಿಯಮಿತ ನಾಯಕ ಕ್ರೇಗ್ ಎರ್ವಿನ್ ಇನ್ನೂ ಎಡ ಮಂಡಿರಜ್ಜು ಗಾಯದಿಂದ ಚೇತರಿಕೆ ಕಾಣದ ಹಿನ್ನೆಲೆಯಲ್ಲಿ ನೂತನ ನಾಯಕನನ್ನು ನೇಮಿಸಲಾಗಿದೆ.
ಭಾರತ ವಿರುದ್ಧದ 3 ಪಂದ್ಯಗಳ ಏಕದಿನ ಸರಣಿಗೆ ಜಿಂಬಾಬ್ವೆ 17 ಮಂದಿಯ ಏಕದಿನ ತಂಡವನ್ನು ಪ್ರಕಟಿಸಿದೆ. ಮೂರೂ ಪಂದ್ಯಗಳು ಹರಾರೆ ಸ್ಪೋರ್ಟ್ಸ್ ಕ್ಲಬ್‌ನಲ್ಲಿ ನಡೆಯಲಿದೆ. ಎರಡನೇ ಮತ್ತು ಮೂರನೇ ಪಂದ್ಯ ಕ್ರಮವಾಗಿ ಆಗಸ್ಟ್ 20 ಮತ್ತು 22 ರಂದು ನಿಗದಿಯಾಗಿದೆ.
ನಾಯಕ ಕ್ರೇಗ್‌ ಇರ್ವಿನ್‌ ಜೊತೆಗೆ ಭುಜದ ಸ್ನಾಯುರಜ್ಜು ಗಾಯಗಳಿಂದ ಚೇತರಿಸಿಕೊಳ್ಳುತ್ತಿರುವ ಸ್ಟಾರ್‌ ಬೌಲರ್ ಬ್ಲೆಸ್ಸಿಂಗ್ ಮುಜರಬಾನಿ, ತೆಂಡೈ ಚಟಾರಾ ಮತ್ತು ವೆಲ್ಲಿಂಗ್‌ಟನ್ ಮಸಕಡ್ಜಾ ಕೂಡ ತಂಡದಲ್ಲಿ ಇಲ್ಲ. ಈ ಆಟಗಾರರು ಬಾಂಗ್ಲಾ ವಿರುದ್ಧದ ಸರಣಿಯಲ್ಲಿ ಗಾಯದ ಸಮಸ್ಯೆಗೆ ಒಳಗಾಗಿದ್ದಾರೆ.
ಜಿಂಬಾಂಬ್ವೆ ತಂಡ:
ರೆಗಿಸ್ ಚಕಬ್ವಾ (ನಾಯಕ), ರಿಯಾನ್ ಬರ್ಲ್, ತನಕಾ ಚಿವಂಗಾ, ಬ್ರಾಡ್ಲಿ ಇವಾನ್ಸ್, ಲ್ಯೂಕ್ ಜೊಂಗ್ವೆ, ಸಿಕಂದರ್‌ ರಾಜಾ, ಇನೋಸೆಂಟ್ ಕೈಯಾ, ತಕುದ್ಜ್ವಾನಾಶೆ ಕೈಟಾನೊ, ಕ್ಲೈವ್ ಮಡಾಂಡೆ, ವೆಸ್ಲಿ ಮಾಧೆವೆರೆ, ತಡಿವಾನಾಶೆ ಮರುಮಾನಿ, ಜಾನ್ ಮಸಾರಾ, ಟೋನಿ ವ್ಹಿನಿಕಾನ್‌ಗಾರ್, ಟೋನಿ ಮುನ್ಯೊಂಗರ್ ಮಿಲ್ಟನ್ ಶುಂಬಾ, ಡೊನಾಲ್ಡ್ ತಿರಿಪಾನೊ

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!